Krg Studios Re introduce Dheeren Ramkumar as Dheeren R Rajkumar ಕನ್ನಡಿಗರ ಆರಾಧ್ಯದೈವ ಡಾ, ರಾಜ್ ಕುಮಾರ್ ರವರ ಮೊಮ್ಮೊಗ ಧೀರೇನ್ ರಾಮಕುಮಾರ್ ಈಗ ಧೀರೇನ್ ಆರ್. ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮೂಲಕ ಬರುತ್ತಿದ್ದಾರೆ.

ಕನ್ನಡಿಗರ ಆರಾಧ್ಯದೈವ ಡಾ, ರಾಜ್ ಕುಮಾರ್ ರವರ ಮೊಮ್ಮೊಗ ಧೀರೇನ್ ರಾಮಕುಮಾರ್ ಈಗ ಧೀರೇನ್ ಆರ್. ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮೂಲಕ ಬರುತ್ತಿದ್ದಾರೆ.

ರಾಜಕುಮಾರ್ ರವರ ಎರಡನೇ ಮಗಳಾದ ಪೂರ್ಣಿಮ ರಾಮಕುಮರ್ ದಂಪತಿಗಳ ಮಗನಾದ ಧೀರೇನ್ ಆರ್ ರಾಜ್ ಕುಮಾರ್ ಆಗಿ ಮರು ನಾಮಕರಣದೊಂದಿಗೆ ಕನ್ನಡಿಗರ ಮುಂದೆ ಬರಲಿದ್ದಾರೆ

ಧೀರೇನ್ ಆರ್. ರಾಜ್ ಕುಮಾರ್ ಕೆ.ಆರ್.ಜಿ.ಸ್ಟೂಡಿಯೋಸ್ ಮೂಲಕ ಹೊಸ ಪ್ರಾಜೆಕ್ಟ್ ನೊಂದಿಗೆ ಮರುಪರಿಚಯವಾಗುತ್ತಿದ್ದಾರೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನೂ ಕೂಡ ಕೆ.ಆರ್.ಜಿ ಘೋಷಿಸಿದೆ. ಚಿತ್ರದ ಕುರಿತು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದು.

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ.ಆರ್.ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಟ್ಟಿದೆ. “ರತ್ನನ್ ಪ್ರಪಂಚ” ಮೂಲಕ ರೋಹಿತ್ ಪದಕಿ, “ಪೌಡರ್” ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, “ಗುರುದೇವ್ ಹೊಯ್ಸಳ” ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕೆ.ಆರ್.ಜಿ.ಗೆ ಇದ್ದು, ಈ‌ ರೀತಿ ಹೊಸ ಪ್ರತಿಭೆಗಳನ್ನು ಪರಿಚಯಿಸಿ, ಕನ್ನಡ ಚಿತ್ರರಂಗವನ್ನು ಬಹು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಗುರಿಯನ್ನು ಸಂಸ್ಥೆ ಹೊಂದಿದೆ.

ಪ್ರಸ್ತುತವಾಗಿ ಬಹು ನಿರೀಕ್ಷಿತ “ಉತ್ತರಕಾಂಡ” ಚಿತ್ರ ಸೆಟ್ಟೇರಿದ್ದು, “ಪೌಡರ್” ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor