Ratna movie trailer Released on Punith Rajkumar Birtday. ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ‘ರತ್ನ’ ಚಿತ್ರದ ಟ್ರೇಲರ್ .
ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ‘ರತ್ನ’ ಚಿತ್ರದ ಟ್ರೇಲರ್ .
ಇದು ಅಪ್ಪು ಅಭಿಮಾನಿಯ ಚಿತ್ರ
. ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ “ರತ್ನ” ಚಿತ್ರದ ಟ್ರೇಲರ್ ಮಾರ್ಚ್ 17, ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ.
ಚಿತ್ರದಲ್ಲಿ ನಾಯಕಿ ಪುನೀತ್ ರಾಜಕುಮಾರ್ ಅಭಿಮಾನಿ ಆಗಿರುತ್ತಾಳೆ. ಅಪ್ಪು ಅಭಿಮಾನಿಯ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ ಎಂದು ನಿರ್ದೇಶಕ ಬಸವರಾಜ್ ಬಳ್ಳಾರಿ ತಿಳಿಸಿದ್ದಾರೆ.

ಇತ್ತೀಚಿಗೆ “ರತ್ನ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ.
ನಿರ್ದೇಶಕ ಬಸವರಾಜ್ ಬಳ್ಳಾರಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿದ್ದಾರೆ. ಸತೀಶ್ ಬಾಬು ಸಂಗೀತ ನಿರ್ದೇಶನ, ಸತೀಶ್ ಗಂಗಾವತಿ ಛಾಯಾಗ್ರಹಣ ಹಾಗೂ ನಾಗೇಂದ್ರ ಅರಸ್ ಅವರ ಸಂಕಲನವಿರುವ ಈ ಚಿತ್ರದ ಸಹ ನಿರ್ಮಾಪಕರು ಮಂಜುನಾಥ್ ಎಂ ಹಾಗೂ ರಾಘವೇಂದ್ರ ಕರೂರ್.


ಹರ್ಷಲ ಹನಿ(ನಾಯಕಿ), ವರ್ಧನ್, ಆನಂದ್ ಅಪ್ಪು, ಬಾಲರಾಜ್ ಒಡೆಯರ್, ನಾಗೇಂದ್ರ ಅರಸ್, ಅಮಿತ್ ರಾವ್, ಸಾರಿಕಮ್ಮ, ರಾಣಿ ಬಸವರಾಜ್, ಸುಚಿತ್ ಚೌವ್ಹಾಣ್, ರಾಮು ಕರೂರ್, ಮಂಜು ದೈವಜ್ಞ ಮುಂತಾದವರು “ರತ್ನ” ಚಿತ್ರದ ತಾರಾಬಳಗದಲ್ಲಿದ್ದಾರೆ.