ಮನರಂಜನೆ ರಸದೌತಣ ಬಡಿಸಲು ಬಂದ ಮೂರನೇ ಕೃಷ್ಣಪ್ಪ 24ಕ್ಕೆ ಚಿತ್ರ ತೆರೆಗೆ

ಬಲು ವಿಶೇಷವಾಗಿದ ಮೂರನೇ ಕೃಷ್ಣಪ್ಪ ಟ್ರೇಲರ್…ಪಕ್ಕ ಹಳ್ಳಿ ಸೊಗಡಿನ ಸಿನಿಮಾ ಮೇ 24ಕ್ಕೆ ರಿಲೀಸ್

ಮನರಂಜನೆ ರಸದೌತಣ ಬಡಿಸಲು ಬಂದ ಮೂರನೇ ಕೃಷ್ಣಪ್ಪ…ಸಖತ್ ಮಜವಾಗಿ ಮೊದಲ ನೋಟ..ಮೇ 24ಕ್ಕೆ ಚಿತ್ರ ತೆರೆಗೆ

ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ಮೂರನೇ ಕೃಷ್ಣಪ್ಪ. ಶುರುವಾದಾಗಿನಿಂದಲೂ ಇಲ್ಲಿವರೆಗೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈ ಚಿತ್ರದ ಮೊದಲ ನೋಟ ಮೂಲಕ ಪ್ರೇಕ್ಷಕರನ್ನು ಆವರಿಸಿಕೊಂಡಿದೆ.

ಮೂರನೇ ಕೃಷ್ಣಪ್ಪ ಟ್ರೇಲರ್ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ‌ ಶುರುವಾಗುವ ಟ್ರೇಲರ್‌ನಲ್ಲಿ ಕೋಲಾರ‌ ಕನ್ನಡ‌ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ, ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರೆಂಟಿ ಎಂಬ ಸಂದೇಶ ರವಾನಿಸಿದೆ.

‘ಮೂರನೇ ಕೃಷ್ಣಪ್ಪ’ ಸಿನಿಮಾವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಶೀರ್ಷಿಕೆಯೊಂದಿಗೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ನವೀನ್ ಮುಂದಾಗಿದ್ದಾರೆ.

ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ.

ಇವರೊಂದಿಗೆ ತುಕಾಲಿ ಸಂತೋಷ್, ಉಗ್ರಂ ಮಂಜು ಸೇರಿದಂತೆ ಹಲವರು ನಟಿಸಿದ್ದಾರೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಕ್ಕೆ ಆನಂದ್ ರಾಜವಿಕ್ರಮ್ ಸಂಗೀತ ನೀಡಿದ್ದು, ಶ್ರೀಕಾಂತ್ ಎಡಿಟಿಂಗ್ ಮಾಡಿದ್ದರೆ, ಯೋಗಿ ಕ್ಯಾಮರಾ ಹ್ಯಾಂಡಲ್ ಮಾಡಿದ್ದಾರೆ. ಮೇ 24ಕ್ಕೆ ಮೂರನೇ ಕೃಷ್ಣಪ್ಪನ ಕಥೆ ತೆರೆಗೆ ಬರಲಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor