*ಮೇ 24ರಂದು ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ*
*ಮೇ 24ರಂದು ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ* .
*ರಾಗಿಣಿ ದ್ವಿವೇದಿ ಅಭಿಮಾನಿಗಳ ಬಳಗದಿಂದ ವಿವಿಧ ಸಮಾಜಿಕ ಕಾರ್ಯಕ್ರಮಗಳ ಆಯೋಜನೆ* .
ಮೇ 24 ಖ್ಯಾತ ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಮೇ 24 ರಂದು ಬೆ10 ರಿಂದ ಸಂಜೆ 5 ರವರೆಗೂ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ. ಜನರಿಗೆ ಉಪಕಾರವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಗಿಣಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ.