ವಾಣಿಜ್ಯಮಂಡಳಿ ಚುನಾವಣೆಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂ.ಎನ್.ಸುರೇಶ್‌ರಿಂದ ಭರವಸೆಯ ಆಶ್ವಾಸನೆ
- ವಾಣಿಜ್ಯಮಂಡಳಿ ಚುನಾವಣೆಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂ.ಎನ್.ಸುರೇಶ್‌ರಿಂದ ಭರವಸೆಯ ಆಶ್ವಾಸನೆ
- ಚುನಾವಣೆಗೂ ಮುನ್ನವೇ ನಿರ್ಮಾಪಕರ ಸಂಘಕ್ಕೆ ಕೋಟಿ ಕೋಟಿ ದೇಣಿಗೆ ತಂದ ಎನ್ ಎಂ ಸುರೇಶ್
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ.
ಜಿದ್ದಾಜಿದ್ದಿನ ಕಣದಲ್ಲಿರುವ ಅಭ್ಯರ್ಥಿಗಳು ಮಂಡಳಿಯ ಚುನಾವಣಾ ರಣಕಣದಲ್ಲಿ ಯುದ್ದಕ್ಕೆ ಸಜ್ಜಾಗಿದ್ದಾರೆ. 2023ರ ಚುನಾವಣೆಯಲ್ಲಿ ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾರುವ ಹಿರಿಯ ನಿರ್ಮಾಪಕ ಎನ್ ಎಂ ಸುರೇಶ್ ಸುದ್ದಿಗೋಷ್ಠಿ ನಡೆಸಿ ವಾಣಿಜ್ಯ ಮಂಡಳಿಯ ಶ್ರೇಯೋಭಿವೃದ್ದಿಗೆ ತಮ್ಮ ಯೋಜನೆಗಳನ್ನು ವಿವರಿಸಿದರು. ತಮ್ಮ ನೇತೃತ್ವದ ತಂಡಕ್ಕೆ ಬೆಂಬಲ ಕೇಳುವುದರ ಜೊತೆಗೆ ವಾಣಿಜ್ಯ ಮಂಡಳಿಯ ಸಮಗ್ರ ಅಭಿವೃದ್ದಿಗೆ ಜೊತೆಯಾಗಿ ಎಂದು ಮನವಿ ಮಾಡಿಕೊಂಡರು.
ಸುದ್ದಿಗೋಷ್ಠಿಯ ಆರಂಭದಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸದ್ಯ ಉಂಟಾಗಿರುವ ಸಮಸ್ಯೆಗೆ ತಮ್ಮ ತಂಡದ ಸಂಪೂರ್ಣ ಬೆಂಬಲ ಇದೆ ಎಂದು ಹಿರಿಯ ನಿರ್ಮಾಪಕ ಎನ್ ಎಂ ಸುರೇಶ್ ಘೋಷಿಸಿದರು.

‘ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಅವರು ಕಾವೇರಿಗಾಗಿ ಹಿಂದೆ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಈ ಚುನಾವಣಾ ಕಣದಲ್ಲಿರುವ ನಮ್ಮ ತಂಡ, ಸದಾ ಈ ಕನ್ನಡ ನಾಡಿನ ಅಸ್ಮಿತೆಯ ವಿಚಾರಗಳಿಗೆ ಬೆಂಬಲವಷ್ಟೆ ಅಲ್ಲದೆ ಯಾವುದೇ ಹಂತದ ಹೋರಾಟ ಅಥವ ತ್ಯಾಗಕ್ಕೆ ಸಿದ್ದರಿದ್ದೇವೆ’ ಎಂದು ಕಾವೇರಿ ಸಮಸ್ಯೆಗೆ ಬಹಿರಂಗ ಬೆಂಬಲ ಘೋಷಿಸಿದರು.
ಚುನಾವಣೆ ಎಂದರೆ ಕೇವಲ ಅಧಿಕಾರ ಅಥವ ಹುದ್ದೆಯ ನಿರೀಕ್ಷೆಯಷ್ಟೆ ಅಲ್ಲ, 75 ವರ್ಷಗಳ ಇತಿಹಾಸ ಇರುವ ನಮ್ಮ ಕನ್ನಡ ಚಲನಚಿತ್ರೋಧ್ಯಮದ ಸಮಗ್ರ ಅಭಿವೃದ್ದಿ, ಆಧುನಿಕತೆ, ತಂತ್ರಜ್ಞಾನ, ಹಾಗೂ ಹಿರಿಯ ಅನುಭವಿಗಳ ಸೂಕ್ತ ಸಲಹೆಗಳೊಂದಿಗೆ ಮಂಡಳಿಯ ಸಮಗ್ರ ಅಭಿವೃದ್ದಿಯನ್ನ ವಾಸ್ತವಿಕವಾಗಿ ಕಟ್ಟಿಕೊಡೋ ಕೆಲಸವಾಗಿದೆ. 30 ವರ್ಷಗಳಿಂದ ಚಿತ್ರೋಧ್ಯಮದಲ್ಲಿರುವ ನಾನು ಕೇವಲ ಹುದ್ದೆಯ ಆಕಾಂಕ್ಷಿಯಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಬದಲಿಗೆ ಈ ಚುನಾವಣೆಯ ಸದಾವಕಾಶವನ್ನು ಬಳಸಿಕೊಂಡು ದಶಕಗಳಿಂದ ಇರುವ ವಾಣಿಜ್ಯ ಮಂಡಳಿಯ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡುವ ಸದುದ್ದೇಶ ಹೊಂದಿದ್ದೇವೆ’ ಎಂದು ತಿಳಿಸಿದರು.
ಚಿತ್ರರಂಗದ ಹಿರಿಯ ನಿರ್ಮಾಪಕ ಸಾ.ರಾ.ಗೋವಿಂದ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನ ದೇಶದದಲ್ಲೇ ಒಂದು ಮಾದರಿ ಮಂಡಳಿಯನ್ನಾಗಿಸುವುದೇ ನಮ್ಮ ಗುರಿಯಾಗಿದೆ. ಚಿತ್ರರಂಗದಲ್ಲಿನ ನೌಕರರ ಸಮಸ್ಯೆಗಳಿಗೆ ಪರಿಹಾರ ಹುಡುಕಿ, ನಟ ನಟಿಯರ ಗೌರವ ಹೆಚ್ಚಿಸುವ ವೇದಿಕೆ ಸೃಷ್ಟಿ ಮಾಡಬೇಕಿದೆ. ಅಲ್ಲದೆ ನೆಲ,ಜಲ,ಭಾಷೆ ವಿಚಾರಕ್ಕೆ ಕನ್ನಡ ಚಿತ್ರರಂಗ ಸದಾ ಸೇತುವೆಯಂತೆ ಕೆಲಸ ಮಾಡುವ ಉದ್ದೇಶ ಹೊಂದಿದ್ದೇವೆ’ ಎಂದರು.

ಈ ಬಾರಿಯ ಚುನಾವಣೆಯಲ್ಲಿ ಮಂಡಳಿಯ ಮಾಜಿ ಅಧ್ಯಕ್ಷರಾದ ಶ್ರೀ ಸಾ.ರಾ.ಗೋವಿಂದ್ ಅವರ ಮಾರ್ಗದರ್ಶನಲ್ಲಿ ಚುನಾವಣೆಗೆ ಸಜ್ಜಾಗಿರುವ ನಮ್ಮ ತಂಡವನ್ನು ಬೆಂಬಲಿಸಿ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಶ್ರೇಯೋಭಿವೃದ್ದಿಗೆ ಸಹಕರಿಸಬೇಕು’ ಎಂದು ವಿನಂತಿಸಿಕೊಂಡರು.
ಎಂ.ಎನ್.ಸುರೇಶ್ ನೇತೃತ್ವದ ಈ ತಂಡಕ್ಕೆ ಮಾರ್ಗದರ್ಶಕರಾಗಿ ಹಿರಿಯ ನಿರ್ಮಾಪಕ,ಹೋರಾಟಗಾರ ಸಾ.ರಾ.ಗೋವಿಂದ್ ನಿಂತಿದ್ದಾರೆ. ತಂಡದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ವಿತರಕ ವಲಯದಿಂದ ಜಿ.ವೆಂಕಟೇಶ್ ಚಿಂಗಾರಿ ಬಿ ಮಹದೇವ್ ಹಾಗೂ ಪ್ರದರ್ಶಕದಿದ ಎಂ ನರಸಿಂಹಲು ಸ್ಪರ್ಧೆಗಿಳಿದಿದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕರ ವಲಯದಿಂದ ರಾಜೇಶ್ ಬ್ರಹ್ಮಾವರ್, ವಿತರಕ ವಲಯದಿಂದ ಕೆ ಪಾರ್ಥ ಸಾರಥಿ, ಖಜಾಂಚಿ ಸ್ಥಾನಕ್ಕೆ ದಯಾಳ್ ಪದ್ಮನಾಭನ್ ಸ್ಪರ್ಧೆ ಮಾಡುತ್ತಿದ್ದು ಕಾರ್ಯದರ್ಶಿ ಸ್ಥಾನಕ್ಕೆ ಸುಂದರ್ ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಲ್ಲರೂ ಸುದ್ದಿಗೋಷ್ಠಿಯಲ್ಲಿ ಹಾಜರಾಗಿ ಚುನಾವಣೆಗೆ ಬೆಂಬಲ ಕೇಳಿದರು.