ಹಿರಿಯ ನಟಿ ಪ್ರತಿಮಾ ದೇವಿ ಇನ್ನಿಲ್ಲ
ಚಿತ್ರರಂಗಕ್ಕೆ ಕಲಾವಿದೆಯಾಗಿ ತಮ್ಮದೇ ಆದ ಸೇವೆ ಸಲ್ಲಿಸಿದ್ದ, ಖ್ಯಾತ ನಟಿ ಶ್ರೀಮತಿ ಪ್ರತಿಮಾದೇವಿ ಅವರು ಇಂದು ನಿಧನರಾದ ಸುದ್ದಿ ತಿಳಿದು ತುಂಬಾ ಬೇಸರವಾಗಿದೆ.ಪ್ರತಿಮಾದೇವಿ ಅವರ ಪತಿ ಶಂಕರ್ ಸಿಂಗ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ವರ್ಷವಿದು. ಇದೇ ಸಮಯದಲ್ಲಿ ಅವರು ನಿಧನರಾಗಿದ್ದು, ದುಖದ ಸಂಗತಿ.ಕನ್ನಡ ಚಿತ್ರರಂಗಕ್ಕೆ ಇವರ ಕುಟುಂಬ ನೀಡಿರುವ ಕೊಡುಗೆ ಅಪಾರ.ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ನಟಿ, ನಿರ್ದೇಶಕಿ ಶ್ರೀಮತಿ ವಿಜಯಲಕ್ಷ್ಮಿ ಸಿಂಗ್ ಸೇರಿದಂತೆ ನಾಲ್ಕು ಮಕ್ಕಳನ್ನು ಪ್ರತಿಮಾ ದೇವಿ ಅವರು ಅಗಲಿದ್ದಾರೆ. ಅವರ ನಿಧನದ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ಹೇಳುತ್ತಾ, ಪ್ರತಿಮಾದೇವಿ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಶ್ರದ್ಧಾಂಜಲಿ ಸಲ್ಲಿಸುತ್ತದೆ.
ಇಂತಿ ಜೈರಾಜ್
ಅಧ್ಯಕ್ಷರು,
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ