15th Bengaluru International Film Festival inaugural Ceremony. 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭ.
ಬೆಂಗಳೂರಿನ ವಿಧಾನ ಸೌದದ ಮುಂದೆ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಮಂತ್ರಿ ಮಹೋದಯರು ಹಾಗೂ ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಡಾಲಿ ಧನಂಜಯ, ಸಾಧುಕೋಕಿಲ, ನಟಿ ಆರಾಧನ ಹಾಗೂ ಚಲನ ಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್. ಎಮ್. ಸುರೇಶ್, ವಿದೇಶಿ ನಿರ್ದೇಶಕರು, ನಿರ್ಮಾಪಕರು ಮತ್ತು ಹಲವಾರು ಗಣ್ಯ ವ್ಯಕ್ತಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
