Actor Komal Kumar new getup in “yala Kunni” movie. ಕೋಮಲ್ ಕುಮಾರ್ ವಜ್ರಮುನಿ ಲುಕ್ ಗೆ ಅಭಿಮಾನಿಗಳು ಫಿದಾ
ಕೋಮಲ್ ಕುಮಾರ್ ವಜ್ರಮುನಿ ಲುಕ್ ಗೆ ಅಭಿಮಾನಿಗಳು ಫಿದಾ
ಗಣೇಶನ ಹಬ್ಬದಂದು ಬಿಡುಗಡೆಯಾಯಿತು ಕೋಮಲ್ ಕುಮಾರ್ ಅಭಿನಯದ “ಯಲಾಕುನ್ನಿ” ಚಿತ್ರದ ಫಸ್ಟ್ ಲುಕ್.
ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ,ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ಯಲಾಕುನ್ನಿ” ಚಿತ್ರದ ಫಸ್ಟ್ ಲುಕ್ ಗಣೇಶನ ಹಬ್ಬದ ಶುಭದಿನದಂದು ಬಿಡುಗಡೆಯಾಗಿದೆ. ಕೋಮಲ್ ಅವರು ಖ್ಯಾತ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೋಮಲ್ ಅವರ ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಷ್ಟೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.