Armaan Malik singing a song ಅರ್ಮಾನ್ ಮಲಿಕ್ ಹಾಡಿದರು ಶುಗರ್ ಫ್ಯಾಕ್ಟರಿ ಗೆ “ಹಣೆಬರಹ”ದ ಹಾಡು..

“ಅರ್ಮಾನ್ ಮಲಿಕ್ ಹಾಡಿದರು “ಹಣೆಬರಹ”ದ ಹಾಡು..

“ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದಿಂದ ಮತ್ತೊಂದು ಸುಮಧುರ ಗೀತೆ ಬಿಡುಗಡೆಯಾಗಿದೆ. ರಾಘವೇಂದ್ರ ಕಾಮತ್ ಬರೆದಿರುವ “ಹಣೆಬರಹ” ಎಂದು ಆರಂಭವಾಗುವ, ಭಾವನೆಗಳನ್ನು ಬಿಂಬಿಸುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಇಂಪಾಗಿ ಹಾಡಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಕೂಡ ಎಲ್ಲರ ಮನ ಗೆದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ ಬರುತ್ತಿದೆ.

ಡಾರ್ಲಿಂಗ್ ಕೃಷ್ಣ ಈವರೆಗೂ ಅಭಿನಯಿಸಿರುವ ಎಲ್ಲಾ ಚಿತ್ರಗಳಿಗಿಂತ “ಶುಗರ್ ಫ್ಯಾಕ್ಟರಿ” ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಚಿತ್ರ ಎನ್ನಲಾಗುತ್ತಿದೆ. ಅಭಿಮಾನಿಗಳು ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ‌.

ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು ಕೂಡ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor