Aru gowda Re Entry ನಟ ಅರುಣ್ ರಾಮ್ ಗೌಡ(ಅರು ಗೌಡ) ರೀ ಎಂಟ್ರಿ.

*ಅದ್ದೂರಿ ಹಾಗೂ ಅಪಾರ ವೆಚ್ಚದ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ನಟ ಅರುಣ್ ರಾಮ್ ಗೌಡ(ಅರು ಗೌಡ) ರೀ ಎಂಟ್ರಿ* .

*ತಮ್ಮ ಹುಟ್ಟುಹಬ್ಬದ ದಿನ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿದ ಅರುಣ್ ರಾಮ್ ಗೌಡ* .

“ಮುದ್ದು ಮನಸ್ಸೆ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ, ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು. ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು.
ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಅರುಣ್ ರಾಮ್ ಗೌಡ ತಮ್ಮ ಹುಟ್ಟುಹಬ್ಬದ ದಿನ(ಜುಲೈ 7) ಈ ಚಿತ್ರದ ಮೊದಲ ಗ್ಲಿಂಪ್ಸನ್ನು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಿಡುಗಡೆ ಮಾಡಿದ್ದಾರೆ.

ಇದೊಂದು ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಮೂವೀ ಎಂದು ತಿಳಿಸಿರುವ ಅರುಣ್ ರಾಮ್ ಗೌಡ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ಸಾಕಷ್ಟು ಜನಪ್ರಿಯರಾಗಿರುವವರೆ ಇರುತ್ತಾರೆ. ನನ್ನ ಹುಟ್ಟುಹಬ್ಬದ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor