Bad movie in & as apoorva bharadwaj “ಚಿತ್ರದಲ್ಲಿ ಅಪೂರ್ವ ಭಾರದ್ವಾಜ್ ಪ್ರೀತಿಯ ಪ್ರತಿನಿಧಿ.”

BADಚಿತ್ರದಲ್ಲಿ ಅಪೂರ್ವ ಭಾರದ್ವಾಜ್ ಪ್ರೀತಿಯ ಪ್ರತಿನಿಧಿ.

ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ “ನಾನು, ಅದು ಮತ್ತು ಸರೋಜ” ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್, ಪಿ.ಸಿ.ಶೇಖರ್ ನಿರ್ದೇಶನದ “BAD” ಚಿತ್ರದಲ್ಲಿ ನಟಿಸಿದ್ದಾರೆ.

“BAD” ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರುಪಾತ್ರಗಳಿದೆ ಎಂದು ಮೊದಲೆ ತಿಳಿಸಲಾಗಿತ್ತು. ಆ ಪೈಕಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ಮ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ.
ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿ ಅನು. ತಾಯಿ ಪ್ರೀತಿ ಕಾಣದ ಈ ಹುಡುಗಿಗೆ ಯಾರ ಬಳಿ ಹೇಗೆ ಪ್ರೀತಿ ವ್ಯಕ್ತಪಡಿಸಬೇಕೆಂದು ತಿಳಿದಿರುವುದಿಲ್ಲ. ಈ ಪಾತ್ರಕ್ಕೆ ಮಾತು ಕಡಿಮೆ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರವಿದು.‌ ಹಾಗಾಗಿ ಅಪೂರ್ವ ಅವರ ಹಿಂದಿನ ಧಾರಾವಾಹಿ ಹಾಗೂ ಚಿತ್ರಗಳನ್ನು ನೋಡಿ, ಈ ಪಾತ್ರಕ್ಕೆ ಇವರೆ ಸರಿ ಹೊಂದುತ್ತಾರೆ ಎಂದು ಅಪೂರ್ವ ಅವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

ಅಪೂರ್ವ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಹಾಗೂ ಚಿತ್ರದಲ್ಲಿ ಅವರ ಪಾತ್ರ ಬರುವ ಕಡೆಯೆಲ್ಲಾ ಪಿಂಕ್(ಗುಲಾಬಿ ಬಣ್ಣ) ಶೇಡ್ ನಲ್ಲಿ ಚಿತ್ರಿಸಲಾಗಿದೆ ಎನ್ನುತ್ತಾರೆ ನಿರ್ದೇಶಕರು.

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ “BAD” ಚಿತ್ರಕ್ಕಿದೆ.

“ಪ್ರೀತಿಯ ರಾಯಭಾರಿ” ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ “BAD” ಚಿತ್ರದಲ್ಲಿ “ಕ್ರೋಧ” ವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor