Balaramana aa.. dinagalu movie updates. ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.
.
ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ. .
ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ “ಬಲರಾಮನ ದಿನಗಳು” ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ. ಪ್ರಸ್ತುತ “ಬಲರಾಮನ ದಿನಗಳು” ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು ಆಶಿಶ್ ವಿದ್ಯಾರ್ಥಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಆಶಿಶ್ ವಿದ್ಯಾರ್ಥಿ ಅವರಿಗೆ ಸ್ವಾಗತ ಕೋರಿದ್ದಾರೆ.

ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರ ಚೊಚ್ಚಲ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸುತ್ತಿದ್ದಾರೆ. ಟೈಗರ್ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ. ಹೆಸರಾಂತ ನಟ ಅತುಲ್ ಕುಲಕರ್ಣಿ ಅವರು ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ.