Bharjari Gandu Movie Release on 5th. April. “ಈ ವಾರ ತೆರೆಗೆ ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು” .
“ಈ ವಾರ ತೆರೆಗೆ ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು” .
ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ಭರ್ಜರಿ ಗಂಡು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ನಿರ್ಮಿಸಿರುವ ಈ ಚಿತ್ರವನ್ನು ಪ್ರಸಿದ್ಧ್ ನಿರ್ದೇಶಿಸಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.

ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.