Chandramukhi 2 release on 19th of September. ಸೆಪ್ಟೆಂಬರ್19ಕ್ಕೆ ಗಣೇಶ ಹಬ್ಬಕ್ಕೆ ಚಂದ್ರಮುಖಿ ಬಿಡುಗಡೆ.

*ರಾಘವ್ ಲಾರೆನ್ಸ್-ಕಂಗನಾ ಜೋಡಿಯ ’ಚಂದ್ರಮುಖಿ-2’ ಚಿತ್ರಕ್ಕೆ ಬಿಡುಗಡೆಯ ಭಾಗ್ಯ ಗಣೇಶ್ ಚತುರ್ಥಿಗೆ ಪಿ.ವಾಸು ನಿರ್ದೇಶನ 65ನೇ ಸಿನಿಮಾ ಬಿಡುಗಡೆ*

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2.

2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. 18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor