ಹಾರಾರ್ – ಕಾಮಿಡಿ ಜಾನರ್ ನ “ಛೂ ಮಂತರ್” ಚಿತ್ರದಲ್ಲಿ ಶರಣ್

ತಮ್ಮ ಅಮೋಘ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ “ಛೂ ಮಂತರ್” ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ.

ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುತ್ತಾ ಬಂದಿರುವ, ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಚಿತ್ರ.

“ಕರ್ವ” ಚಿತ್ರದ‌ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್, ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಹಾರಾರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರಕಾಂಡ ಹಾಗೂ ಲಂಡನ್ ನಲ್ಲಿ ಚಿತ್ರೀಕರಣ ನಡೆದಿದೆ.

ಅನೂಪ್ ಕಟ್ಟುಕರನ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್(ಕೆ.ಜಿ.ಎಫ್ ಖ್ಯಾತಿ) ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ “ಛೂ ಮಂತರ್” ಚಿತ್ರಕ್ಕಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor