Dare devil Mustafa successfully running ಪ್ರೇಕ್ಷಕರ ಮನಗೆದ್ದು 2ನೇ ವಾರಕ್ಕೆ ಕಾಲಿಟ್ಟ “ಡೇರ್ ಡೆವಿಲ್ ಮುಸ್ತಫಾ”

*ಕನ್ನಡಿಗರ ಮನ ಗೆದ್ದ ‘ಡೇರ್ ಡೆವಿಲ್ ಮುಸ್ತಾಫಾ.

*ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾ ಎರಡನೇ ವಾರ ಅಮೋಘ ಪ್ರದರ್ಶನ*

ಸ್ಯಾಂಡಲ್ ವುಡ್ ನಲ್ಲೀಗ ಡೇರ್ ಡೆವಿಲ್ ಮುಸ್ತಾಫಾನ ಹವಾ ಜೋರಾಗಿದೆ. ಕಳೆದ ವಾರ ತೆರೆಗೆ ಬಂದ ಈ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ಡೇರ್ ಡೆವಿಲ್ ಮುಸ್ತಾಫ್ ಅಮೋಘ ಎರಡನೇ ವಾರ ಪ್ರದರ್ಶನ ಕಾಣುತ್ತಿದೆ. ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ಜನ ಥಿಯೇಟರ್ ಗೆ ಬರೋದಿಕ್ಕೆ ಹಿಂದೇಟು ಹಾಕುತ್ತಿರುವ ಈ ಕಾಲಘಟ್ಟದಲ್ಲಿ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಕಣ್ತುಂಬಿಕೊಂಡು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ.‌ .ಪ್ರತಿಯೊಬ್ಬರು ಇಂತಹ ಚಿತ್ರ ಮಿಸ್ ಮಾಡದೇ ನೋಡಬೇಕು ಎನ್ನುತ್ತಿದ್ದಾರೆ.

ಚಿತ್ರಕ್ಕೆ ಈ ಮಟ್ಟಿಗಿನ ವಿಮರ್ಶೆ ಹಾಗೂ ಬೇಡಿಕೆ ಸಿಗುತ್ತಿರುವ ಬೆನ್ನಲ್ಲೆ ವಿದೇಶದಲ್ಲಿ ಡೇರ್ ಡೆವಿಲ್ ಮುಸ್ತಾಫಾನ ದರ್ಶನಕ್ಕೆ ಚಿತ್ರತಂಡ ಸಜ್ಜಾಗಿದೆ. ಈ ವಾರ ಅಮೆರಿಕಾ ಹಾಗೂ ಯುರೋಪ್ ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದು, ಮುಂದಿನ ವಾರ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದುಬೈ ಸೇರಿದಂತೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ.
ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor