“Gana” movie release on January 31st. ಗಣರಾಜ್ಯೋತ್ಸವದ ನಂತರ ಬಿಡುಗಡೆಯಾಗಲಿದೆ ವಿಭಿನ್ನ ಕಥಾಹಂದರ ಹೊಂದಿರುವ “ಗಣ” ಚಿತ್ರ
ಗಣರಾಜ್ಯೋತ್ಸವದ ನಂತರ ಬಿಡುಗಡೆಯಾಗಲಿದೆ ವಿಭಿನ್ನ ಕಥಾಹಂದರ ಹೊಂದಿರುವ “ಗಣ” ಚಿತ್ರ
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಈ ಚಿತ್ರ ಜನವರಿ 31ರಂದು ತೆರೆಗೆ .
ದೇಶದೆಲ್ಲೆಡೆ ಜನವರಿ 26 ಗಣರಾಜ್ಯೋತ್ಸವದ ಸಂಭ್ರಮ. ಇದೇ ಸಂಭ್ರಮದ ಹೊಸ್ತಿಲಲ್ಲಿ ಅಂದರೆ ಜನವರಿ 31ರಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ.

ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.