Gana poster Released ಗಣಾಧ್ಯಕ್ಷರ ಅಬ್ಬರಕ್ಕೆ ತಾರೆಯರ ಬೆಂಬಲ

*ಸಿನಿತಾರೆಯರು ಬಿಡುಗಡೆ ಮಾಡಿದರು “ಗಣ” ಚಿತ್ರದ ಫಸ್ಟ್ ಲುಕ್* ..

ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಯಿತು.‌‌‌
ವಿಜಯ ರಾಘವೇಂದ್ರ, ಶೃತಿ ಹರಿಹರನ್, ಪನ್ನಗಭರಣ, ವಾಸುಕಿ ವೈಭವ್, ಮೇಘನರಾಜ್, ರಾಗಿಣಿ ಪ್ರಜ್ವಲ್,‌ ಸಿಂಪಲ್ ಸುನಿ, ಶರಣ್, ಮೇಘ ಶೆಟ್ಟಿ, ರಾಗಿಣಿ ದ್ವಿವೇದಿ, ಪ್ರಣಾಮ್ ದೇವರಾಜ್, ತರುಣ್ ಸುಧೀರ್, ರಚನ ಇಂದರ್, ಗಿರೀಶ್ ಶಿವಣ್ಣ, ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್, ಅಮೃತ ಅಯ್ಯಂಗಾರ್ ಹಾಗೂ ನಿರ್ದೇಶಕ ಲೋಹಿತ್ ಸೇರಿದಂತೆ ಹದಿನೇಳಕ್ಕೂ ಹೆಚ್ಚು ಚಂದನವನದ ತಾರೆಯರು “ಗಣ” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿರುವುದು ವಿಶೇಷ.
ಫಸ್ಟ್ ಲುಕ್ ಗೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಫಸ್ಟ್ ಲುಕ್ ನಲ್ಲಿ ಪ್ರಜ್ವಲ್ ಅವರ‌ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಚಿಕ್ಕಬಳ್ಳಾಪುರ ಶ್ರೀನಿವಾಸ್.

ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor