Hattrick Hero Shivaraj Kumar new movie updates. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹೊಸ ಸಿನಿಮಾದ ಅಪ್ ಡೇಟ್…ಶೂಟಿಂಗ್ ಗೆ ರೆಡಿ ಚಿತ್ರತಂಡ
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹೊಸ ಸಿನಿಮಾದ ಅಪ್ ಡೇಟ್…ಶೂಟಿಂಗ್ ಗೆ ರೆಡಿ ಚಿತ್ರತಂಡ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಗಳ ಪೈಕಿ ನಿರೀಕ್ಷೆ ಹೆಚ್ಚಿಸಿರುವುದು ಈ ಸಿನಿಮಾ. ಈ ಚಿತ್ರದ ಕುರಿತ ಹೊಸ ಅಪ್ ಡೇಟ್ ಸಿಕ್ಕಿದೆ. ಇಂದು ಶಿವಣ್ಣನ ಮಡದಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದೆ.
ಶಿವರಾಜ್ ಕುಮಾರ್ ಗೆ ಆ್ಯಕ್ಷನ್ ಕಟ್ ಹೇಳ್ತಿರುವುದು ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ‘ಪಾಯುಮ್ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿರುವ ಇವರಿಗೆ ನಿರ್ದೇಶಕನಾಗಿ ಎರಡನೇ ಸಿನಿಮಾ.
ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ಡಿಫ್ರೆಂಟ್ ರೋಲ್ನಲ್ಲಿ ಕಾಣಸಿಕೊಳ್ಳಲಿದ್ದಾರೆ. ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಸದ್ಯ ಮ್ಯೂಸಿಕ್ ವರ್ಕ್ ಭರದಿಂದ ಸಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ.
ಸದ್ಯಕ್ಕೆ ಬೇರೆ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳಲು ಸಜ್ಜಾಗಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ, ಎಜೆ ಶೆಟ್ಟಿ ಛಾಯಾಗ್ರಹಣ, ದೀಪು S ಕುಮಾರ್ ಸಂಕಲನ, ರವಿ ಸಂತೆ ಹಕ್ಲು ಕಲಾ ನಿರ್ದೇಶನ ಚಿತ್ರಕ್ಕಿದೆ.