Hostel hudugaru bekagiddare press meet in shivarajkumar house ಹಾಸ್ಟೆಲ್ ಹುಡುಗರ’ ಸಕ್ಸಸ್ ಗೆ ಸಾಥ್ ಕೊಟ್ಟ ಮಾಸ್ ಲೀಡರ್ ಶಿವಣ್ಣ.

’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಮಾಸ್ ಲೀಡರ್ ಶಿವಣ್ಣ.

ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಕನಸ್ಸಿನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗಿದೆ. ಹಾಸ್ಟೆಲ್ ಹುಡುಗರ ಫನ್ ರೈಡ್ ಕಥೆಯನ್ನು ನಿನ್ನೆ ಗೀತಾ ಶಿವರಾಜ್ ಕುಮಾರ್ ಮಗಳು ನಿವೇದಿತಾ ಒಟ್ಟಿಗೆ ನರ್ತಕಿ ಚಿತ್ರಮಂದಿರದಲ್ಲಿ ವೀಕ್ಷಿಸಿ ಎಂಜಾಯ್ ಮಾಡಿದ್ದರು. ಇಂದು ಶಿವಣ್ಣನ ನಾಗವರ ನಿವಾಸದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಸಕ್ಸಸ್ ಮೀಟ್ ಹಮ್ಮಿಕೊಳ್ಳಲಾಗಿತ್ತು. ಹೊಸಬರ ಹೊಸ ಪ್ರಯತ್ನಕ್ಕೆ ಶಿವಣ್ಣ, ಗೀತಕ್ಕೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಶಿವಣ್ಣ ಮಾತನಾಡಿ, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಇಡೀ ತಂಡಕ್ಕೆ ಗುಡ್ ಲಕ್. ನಿನ್ನೆ ನಾನು ಸಿನಿಮಾ ನೋಡಬೇಕಿತ್ತು. ವರುಣ್ ಗೆ ಹೇಳಿದ್ದೇ ನಾನು ಫಸ್ಟ್ ಡೇ ನೋಡುತ್ತೇನೆ ಎಂದು. ಆದರೆ ಜಾಹೀರಾತು ಶೂಟ್ ಇದ್ದಿದ್ದರಿಂದ ಆಗಲಿಲ್ಲ. ಅದಕ್ಕೆ ಗೀತಾ ಬಂದಿದ್ದರು. ಮೋರಲ್ ಸಪೋರ್ಟ್ ಆಗಿರುತ್ತದೆ ಎಂದಿದ್ದೆ. ಸಿನಿಮಾ ಚೆನ್ನಾಗಿದ್ದರೆ ಮೋರಲ್ ಸಪೋರ್ಟ್ ಗಿಂತ ನಾವು ನೋಡಿ ತೃಪ್ತಿಪಡಬಹುದು. ನನ್ನ ಪರವಾಗಿ, ನನ್ನ ಚಿಕ್ಕ ಮಗಳು ನಿವೇದಿತಾ ಎಲ್ಲರೂ ಸಿನಿಮಾ ನೋಡಿದರು. ವರುಣ್ ನನಗೆ 15 ವರ್ಷದಿಂದ ಗೊತ್ತು. ಆ ಸಮಯದಿಂದ ನೋಡುತ್ತಿದ್ದೇನೆ. ತುಂಬ ಕಷ್ಟಪಟ್ಟು ಮೇಲೆ ಬಂದವರು. ಯಾವುದೇ ಮಾಡಿದರು ಬಹಳ ಶಿಸ್ತಿನಿಂದ ಮಾಡುತ್ತಾನೆ. ಅವರ ಬಳಿಕ ಸಿನ್ಸಿಯಾರಿಟಿ ಇದೆ. ನನಗೆ ಅದು ತುಂಬಾ ಇಷ್ಟ. ಸಾಂಗ್ಸ್ ಎಲ್ಲಾ ನೋಡಿದಾಗ ತುಂಬಾ ಇಂಟ್ರೆಸ್ಟಿಂಗ್ ಅನಿಸಿತು. ಒನ್ಸ್ ನೋಡಿದಾಗ ಒಂದು ಸ್ಟೈಕ್ ಆಯ್ತು. ಜನ ಥಿಯೇಟರ್ ಗೆ ಬರದ ಸಮಯದಲ್ಲಿ ಜನ ಥಿಯೇಟರ್ ಗೆ ಬಂದು ಸಪೋರ್ಟ್ ಮಾಡಿದ್ದಾರೆ. ಇಡೀ ಸ್ಯಾಂಡಲ್ ವುಡ್ ಸಿನಿಮಾಗೆ ಸಾಥ್ ಕೊಟ್ಟಿದೆ. ಇಂಡಸ್ಟ್ರೀ ಅಂದರೆ ಒಂದು ಫ್ಯಾಮಿಲಿ. ಫ್ಯಾಮಿಲಿ ಅಂದಾಗ ಯಾರದ್ದೇ ಸಿನಿಮಾವಾಗಲಿ ಪ್ರೋತ್ಸಾಹ ಮಾಡಬೇಕು ಎಂದರು.

ರಮ್ಯಾ ವಿವಾದದ ಬಗ್ಗೆಯೂ ಮಾತನಾಡಿದ ಶಿವಣ್ಣ, ಯಾರ ಬಗ್ಗೆ ಏನು ಕಮೆಂಟ್ ಮಾಡುವುದು ಬೇಡ. ಎಲ್ಲದಕ್ಕಿಂತ ಕೊನೆಗೆ ಗೆಲುವು ಮುಖ್ಯ. ಸಿನಿಮಾ ಬರೋಕು ಮೊದಲು ಒಳ್ಳೆ ರಿಪೋರ್ಟ್ ಇತ್ತು. ಒಳ್ಳೆ ಮನಸ್ಸಿನಿಂದ ಮಾಡಿದರೆ ಅದಕ್ಕೆ ಯಾವುದೇ ತಡೆ ಬರಲ್ಲ. ಅದಕ್ಕೆ ಇದೇ ಉತ್ತಮ ಉದಾಹರಣೆ. ಅಭಿಮಾನಿ ದೇವರುಗಳು ಒಳ್ಳೆ ಸಿನಿಮಾ ಕೈಬಿಡಲ್ಲ. ಸತ್ಯ ಇದ್ದರೆ ಜಯ ಇದ್ದೇ ಇರುತ್ತೆ. ಅವರವರು ತಿಳಿದುಕೊಳ್ಳಬೇಕು. ಯಾಕೆ ಈಗಾಯ್ತು ಅನ್ನೋದು ಗೊತ್ತಾಗ್ತಿಲ್ಲ. ನಮ್ಮ ಇಂಡಸ್ಟ್ರಿ ಬೆಳೀಬೇಕು ಅಷ್ಟೆ. ಅದನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಹೊಸಬರು ಬಂದಾಗ ಎಲ್ಲರೂ ಸಪೋರ್ಟ್ ಮಾಡಬೇಕು. ಆ ವಿಚಾರವನ್ನು ಈಗ ದೊಡ್ಡದು ಮಾಡುವುದು ಬೇಡ ಎಂದರು.

ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಈ ತರ ಸಿನಿಮಾ ನೋಡಿ ಬಹಳ ವರ್ಷವಾಗಿತ್ತು. ವರುಣ್ ನಮ್ಮ ಕುಟುಂಬ. ನಿರ್ದೇಶಕರಿಂದ ಹಿಡಿದು ಎಲ್ಲರು ಹೊಸಬರೇ. ಎಲ್ಲವೂ ಹೊಸತನದಿಂದ ಕೂಡಿದೆ. ಹಾಸ್ಟೆಲ್ ಲೈಫ್ ಹೀಗೆ ಇತ್ತೇನೋ ಅನಿಸುವಷ್ಟು ಬಹಳ ಸ್ವಾಭಾವಿಕವಾಗಿತ್ತು. ಎಲ್ಲಾ ಫ್ಯಾಮಿಲಿ ಕುಳಿತು ನೋಡಬಹುದು. ಈ ತರ ಸಿನಿಮಾಗಳು ಮತ್ತಷ್ಟು ಬರಬೇಕು. ಆರಂಭದಿಂದ ಕೊನೆತನಕ ಎಲ್ಲಿಯೂ ಬೋರ್ ಆಗುವುದಿಲ್ಲ. ನಾನು ಸಿನಿಮಾ ಎಂಜಾಯ್ ಮಾಡಿದೆ. ಇಡೀ ತಂಡಕ್ಕೆ ಎಲ್ಲರಿಗೂ ಒಳ್ಳೆದಾಗಲಿ ಎಂದರು.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ದಿಗಂತ್, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್, ರಮ್ಯಾ ಸಾಥ್ ಕೊಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಬ್ಯಾನರ್ ನಡಿ ಈ ಚಿತ್ರವನ್ನು ಅರ್ಪಿಸಿದ್ದಾರೆ. ಬಹುತೇಕ ಹೊಸ ಪ್ರತಿಭೆಗಳು ನಟಿಸಿ ಸೈ ಎನಿಸಿಕೊಂಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರವನ್ನು ವರುಣ್ ಗೌಡ ಹಾಗೂ ಪ್ರಜ್ವಲ್ ನಿರ್ಮಿಸಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಸಿನಿಮಾಗಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor