Jana Kannada movie shooting Started.

ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ
“ಜನ” ಚಿತ್ರಕ್ಕೆ ಚಾಲನೆ

ವಿತರಕ ಬಿ.ಜಿ.ಚಂದನ್‌ಕುಮಾರ್ ಈಗ ನಿರ್ದೇಶಕ

ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ
“ಜನ” ಚಿತ್ರಕ್ಕೆ ಚಾಲನೆ

ಬಣ್ಣದ ಲೋಕದ ಆಕರ್ಷಣೆಗೆ ಒಳಗಾಗದವರೇ ಇಲ್ಲ, ನಟನಾಗಬೇಕೆಂದು ಬಂದವರು ನಿರ್ದೇಶಕ, ನಿರ್ಮಾಪಕನಾಗಿದ್ದೂ ಇದೆ, ನಿರ್ದೇಶಕನಾಗಬೇಕೆಂದು ಬಂದವರು ನಟ, ನಿರ್ದೇಶಕನಾಗಿಯೂ ಬೆಳೆದಿದ್ದಾರೆ.

ಆದರೆ ಇಲ್ಲೊಬ್ಬ ವಿತರಕ ನಿರ್ದೇಶಕನಾಗುತ್ತಿರುವುದು ವಿಶೇಷ. ದಶಕದ ಹಿಂದೆ ತಾನೊಬ್ಬ ನಿರ್ದೇಶಕನಾಗಬೇಕೆಂಬ
ಮಹತ್ವಾಕಾಂಕ್ಷೆಯಿಂದ ಮಂಡ್ಯದಿಂದ ಗಾಂಧಿ ನಗರಕ್ಕೆ ಕಾಲಿಟ್ಟ ಬಿ.ಜಿ.ಚಂದನ್‌ಕುಮಾರ್ ವಿತರಕನಾಗಿ ಕಾರ್ಯನಿರ್ವಹಿಸುತ್ತಲೇ ಚಿತ್ರನಿರ್ಮಾಣದ ಎಲ್ಲಾ ಆಯಾಮಗಳನ್ನು ಅರಿತುಕೊಂಡು ಇದೀಗ ನಿರ್ದೇಶಕನಾಗುತ್ತಿದ್ದಾರೆ. ಒಬ್ಬ ನಿರ್ದೇಶಕನಿಗೆ ತನ್ನ ಚಿತ್ರವನ್ನು ಜನರಿಗೆ ಹೇಗೆ ತಲುಪಿಸಬೇಕೆಂಬುದು ಸಹ ಗೊತ್ತಿರಬೇಕು ಎಂಬುದನ್ನು ಅರಿತಿರುವ ಚಂದನ್‌ಕುಮಾರ್ ದಶಕದ ಹಾದಿಯಲ್ಲಿ ಕಥೆ ಬರೆಯುವುದರಿಂದ ಹಿಡಿದು ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವುದನ್ನು ಚೆನ್ನಾಗಿಯೇ ತಿಳಿದುಕೊಂಡೇ ನಿರ್ದೇಶನಕ್ಕಿಳಿದಿದ್ದಾರೆ. ಅವರ ಹೊಸ ಚಿತ್ರದ ಶೀರ್ಷಿಕೆ “ಜನ”. ಈ ಚಿತ್ರದ ಮುಹೂರ್ತ ಸಮಾರಂಭ ದೇವಯ್ಯ ಪಾರ್ಕ್ ಬಳಿಯ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ನಿರ್ದೇಶಕರ ತಂದೆ ಗೋವಿಂದರಾಜ್ ಅವರು ಕ್ಲಾಪ್ ಮಾಡಿದರೆ, ಹಿರಿಯ ನಿರ್ಮಾಪಕ ಚಿನ್ನೇಗೌಡ್ರು ಕ್ಯಾಮೆರಾ ಚಾಲನೆ ಮಾಡಿ ಶುಭ ಹಾರೈಸಿದರು.

ಜನ ಚಿತ್ರದ ಮೂಲಕ ಚೇತನ್‌ಕುಮಾರ್ ಎಂಬ ಯುವಪ್ರತಿಭೆ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇದೊಂದು ಜರ್ನಿಯಲ್ಲಿ ಸಾಗುವ ಕಥೆಯಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಚಿತ್ರೀಕರಿಸುವ ಯೋಜನೆ ನಿರ್ದೇಶಕರಿಗಿದೆ. ಮಾಸ್, ಕ್ಲಾಸ್ ಹೀಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡಿಕೊಂಡಿರುವ ನಿರ್ದೇಶಕ ಚಂದನ್‌ಕುಮಾರ್ ಚಿತ್ರದಲ್ಲಿ ಅಂಡರ್‌ವರ್ಲ್ಡ್ ಶೇಡ್ ಕೂಡ ಇರುತ್ತೆ ಎಂದು ಹೇಳಿದ್ದಾರೆ.

ಈ ಚಿತ್ರವನ್ನು ಸಕ್ಕರೆನಾಡು ಕಂಬೈನ್ಸ್ ಮೂಲಕ ಶ್ರೀಮತಿ ಯಶೋದಮ್ಮ ಗೋವಿಂದರಾಜ್ ಹಾಗೂ ದೀಪಾ ಚಂದನ್‌ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ನರಸಿಂಹಮೂರ್ತಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಮುಂಜಾನೆ ಮಂಜು ಅವರ ಛಾಯಾಗ್ರಹಣ, ಕಾರ್ತೀಕ್ ಅಲೆ ಅವರ ಸಂಗೀತ ಸಂಯೋಜನೆ, ಚಾಲೆಂಜಿಂಗ್ ಸೂರಿ ಅವರ ನೃತ್ಯನಿರ್ದೇಶನ ಜನ ಚಿತ್ರಕ್ಕಿದೆ,

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor