kadhadi Kannada movie release on July. ಮೂರು ಭಾಷೆಗಳಲ್ಲಿ ನಿರ್ಮಾಣವಾದ ಕಾದಾಡಿ ಚಿತ್ರ ತೆರೆಗೆ ಬರಲು ರೆಡಿ

ತೆರೆಗೆ ಸಿದ್ದ ಕಾದಾಡಿ

   ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಈಗ ಆದಿತ್ಯ ಶಶಿಕುಮಾರ್ ಅಂತ ಹೆಸರು ಬದಲಾಯಿಸಿಕೊಂಡಿದ್ದು, ’ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಕೊನೆ ಹಂತದ ಸಲುವಾಗಿ ಮೊನ್ನೆಯಷ್ಟೇ ನಾಯಕ, ನಿರ್ದೇಶಕ ಹಾಗೂ ವಿಶ್ವ ಫಿಲಂಸ್‌ನ ವಿಶ್ವನಾಥ್ ಮಾಧ್ಯಮದ ಎದುರು ಹಾಜರಾಗಿ ಮಾಹಿತಿ ಹಂಚಿಕೊಂಡರು. ಇದಕ್ಕೂ ಮುನ್ನ ಸಿನಿಮಾದ ನಾಲ್ಕು ಹಾಡುಗಳು ಹಾಗೂ ಟ್ರೇಲರ್ ಅನಾವರಣಗೊಂಡಿತು.
  ಸದ್ಯ ನನ್ನ ಹೆಸರನ್ನು ಆದಿತ್ಯಶಶಿಕುಮಾರ್ ಎಂದು ಬದಲಾಯಿಸಿಕೊಂಡಿದ್ದಾನೆ. ಶಾಲಾ ದಾಖಲಾತಿಗಳಲ್ಲಿ ಇದೇ ಹೆಸರಿನಲ್ಲಿ ನಮೂದು ಆಗಿದೆ. ಜ್ಯೋತಿಷವನ್ನು ಹೆಚ್ಚು ನಂಬುವುದರಿಂದ ಈ ರೀತಿ ನಿರ್ಣಯ ತೆಗೆದುಕೊಳ್ಳಲಾಗಿದೆ.
 ಚಿತ್ರಕ್ಕೆ ಇನ್ನು ಪ್ರಚಾರ ಮಾಡಬೇಕಿತ್ತು. ನಿರ್ಮಾಪಕರು ರೀಲ್ಸ್ ಹೆಚ್ಚು ಮಾಡಿಸಿದ್ದಾರೆ. ಆದರೆ ಇದು ಟಿಕೆಟ್ ರೂಪಕ್ಕೆ ಬದಲಾಗೋಲ್ಲ. ಮೂರನೇ ಸಿನಿಮಾದ ಮೇಲೆ ತುಂಬಾ ಭರವಸೆ ಇಟ್ಟುಕೊಂಡಿದ್ದೇನೆ. ನೀವೆಲ್ಲರೂ ಪ್ರೋತ್ಸಾಹ ಕೊಡಬೇಕೆಂದು ಆದಿತ್ಯ ಶಶಿಕುಮಾರ್ ಕೋರಿಕೊಂಡರು.

   ಏಕಕಾಲಕ್ಕೆ ಮೂರು ಭಾಷೆಗಳಲ್ಲಿ ಚಿತ್ರವನ್ನು ಸಿದ್ದಪಡಿಸಲಾಗಿದೆ. ಕಿರುಚಿತ್ರ, ತೆಲುಗುದಲ್ಲಿ ಕಮರ್ಷಿಯಲ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದೇನೆ. ಕನ್ನಡದಲ್ಲಿ ಹೊಸ ಅನುಭವ. ಮೊದಲು ಇಲ್ಲಿ ಬಿಡುಗಡೆ ಮಾಡಿ, ಆಗಸ್ಟ್‌ಗೆ ತೆಲುಗು, ತಮಿಳಿನಲ್ಲಿ ರಿಲೀಸ್ ಮಾಡಲಾಗುವುದೆಂದು ನಿರ್ದೇಶಕರ ಸತೀಶ್ ಮಾಲೆಂಪಾಟಿ ಹೇಳಿಕೊಂಡರು.
ತ್ಯಾಗಮಯವಾಗುತ್ತಿರುವ ಜನರ ಜೀವನವು ದಿನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೆವೆ.ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

   ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ಸೂರಿಸೆಟ್ಟಿ, ಸಂಕಲನ ಪ್ರಕಾಶ್‌ತೋಟ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಬಿ.ಎಲ್.ಸತೀಶ್-ವಿನ್‌ಚೇನ್‌ಆಂಜಿ-ಬಿಂಬಸಾರ-ರಾಮಕೃಷ್ಣ-ರಾಮಸುಂಕರ ಅವರದಾಗಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅಂದಹಾಗೆ ಸಿನಿಮಾವು ಜುಲೈ ಮೊದಲ ವಾರದಂದು ತೆರೆಗೆ ಬರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor