ಕಪೋ ಕಲ್ಪಿತಂ ಚಿತ್ರಕ್ಕೆ U/A ಸರ್ಟಿಫಿಕೇಟ್ ಕೊಟ್ಟ ಸೆನ್ಸಾರ್ ಮಂಡಳಿ
ಸ್ವಯಂ ಕಲ್ಪನೆಯಿಂದ ಆಗುವ ಘಟನೆಗಳು
ಸಂಪೂರ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ಚಿತ್ರ ’ಕಪೋ ಕಲ್ಪಿತಂ’ ಸೆನ್ಸಾರ್ ಮಂಡಳಿಯು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿ ಯುಎ ಪ್ರಮಾಣಪತ್ರ ನೀಡಿದೆ. ನಾಯಕಿ ಮತ್ತು ನಿರ್ದೇಶಕಿ ಸುಮಿತ್ರಾರಮೇಶ್‌ಗೌಡ ಸಿನಿಮಾದ ಕುರಿತಂತೆ ಮಾಹಿತಿಯನ್ನು ಸುದ್ದಿಗೋಷ್ಟಿಯಲ್ಲಿ ಹಂಚಿಕೊಂಡರು. ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದೇನೆ. ಶೀರ್ಷಿಕೆಯು ಸಂಸ್ಕ್ರತ ಪದವಾಗಿದೆ. ಸ್ವಯಂ ಕಲ್ಪನೆ ಎಂಬುದು ಅರ್ಥ ಕೊಡುತ್ತದೆ. ಅಂದರೆ ಒಂದು ವಿಷಯವು ಒಬ್ಬರಿಂದ ಮತ್ತೋಬ್ಬರಿಗೆ ತಲುಪುವಾಗ ಹೆಚ್ಚಿಗೆ ಸೇರಿಕೊಂಡು ಸಂಶಯಕ್ಕೆ ನಾಂದಿಯಾಗುತ್ತದೆ. ಹೀಗಾಯಿತಂತೆ, ಹಾಗಾಯಿತಂತೆ, ಅಂಗಾಯ್ತು, ಇಂಗಾಯ್ತು ಎಂಬಂತೆ ಬಿಂಬಿತವಾಗುತ್ತದೆ. ಅದರಂತೆ ಕುತೂಹಲ ಹಾರರ್ ಕತೆಯಲ್ಲಿ ಯುವಕರ ತಂಡವೊಂದು ದೂರದ ಮನೆಗೆ ಹೋಗುತ್ತಾರೆ. ಅಲ್ಲಿ ಭೂತವಿದೆ ಅಂತ ತಿಳಿದು ಅದರಿಂದ ಹೇಗೆ ತಪ್ಪಿಸಿಕೊಂಡು ಹೊರಗೆ ಬರುತ್ತಾರೆ ಎನ್ನುವುದು ಚಿತ್ರದ ಸಾರಾಂಶವಾಗಿದೆ.

ಮಂಡ್ಯಾ ಜಿಲ್ಲೆ, ಕೆ.ಆರ್.ಪೇಟೆ ಮೂಲದ ಸುಮಿತ್ರಾರಮೇಶ್‌ಗೌಡ ಈ ಹಿಂದೆ ’ಜಿಷ್ಣು’ ಸಿನಿಮಾದಲ್ಲಿ ಪಾತ್ರ ಮಾಡುವ ಜೊತೆಗೆ ಸಹಾಯಕ ನಿರ್ದೇಶಕಿಯಾಗಿ ಅನುಭವ ಪಡೆದುಕೊಂಡಿದ್ದಾರೆ. ಹಿತೈಷಿಗಳ ಸಲಹೆಯಂತೆ ತಾನೇಕೆ ನಿರ್ದೇಶಕಿಯಾಗಬಾರದು ಅಂತ ಯೋಚಿಸಿದ ಪ್ರತಿಫಲ ಇಲ್ಲಿಯವರೆಗೂ ತಂದು ನಿಲ್ಲಿಸಿದೆ. ಕಿರುತೆರೆ ನಟ ಮತ್ತು ಸಣ್ಣ ಪುಟ್ಟ ಪಾತ್ರದಲ್ಲಿ ಅಭಿನಯಿಸಿದ್ದ ಪ್ರೀತಂಮಕ್ಕಿಹಾಲಿ ನಾಯಕ. ನಿವೃತ್ತ ಪೋಲೀಸ್ ಅಧಿಕಾರಿಯಾಗಿ ಸಂದೀಪ್‌ಮಲಾನಿ, ನಿರೂಪಕರಾಗಿ ಗೌರೀಶ್‌ಅಕ್ಕಿ. ಉಳಿದಂತೆ ಶಿವರಾಜ್‌ಕರ್ಕೆರ, ರಾಜೇಶ್‌ಕಣ್ಣೂರ್, ವಿನೀತ್, ವಿಶಾಲ್, ಅಮೋಘ್, ಚೈತ್ರಾ ದೀಕ್ಷಿತ್‌ಗೌಡ ಮುಂತಾದವರ ತಾರಗಣವಿದೆ.
ರಚನೆ,ಚಿತ್ರಕತೆ, ಸಂಭಾಷಣೆ,ಎರಡು ಹಾಡುಗಳಿಗೆ ಸಾಹಿತ್ಯ, ಸಂಗೀತ ಮತ್ತು ನಿರ್ಮಾಣದಲ್ಲಿ ಪಾಲುದಾರಾಗಿರುವುದು ಮಂಗಳೂರಿನ ಗಣಿದೇವ್‌ಕಾರ್ಕಳ. ಛಾಯಾಗ್ರಹಣ-ಸಂಕಲನ ಬಾತುಕುಲಾಲ್ ಅವರದು. ಪದಕ್ಷಿಣ ಕನ್ನಡ, ಉಡುಪಿ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮಗಳ ಸಾಧನೆಗೆ ರಮೇಶ್‌ಚಿಕ್ಕೆಗೌಡ ಸವ್ಯಾಚಿ ಕ್ರಿಯೇಶನ್ಸ್ ಮೂಲಕ ಅಕ್ಷರ ಪ್ರೊಡಕ್ಷನ್ ಸಹ ಯೋಗದೊಂದಿಗೆ ಬಂಡವಾಳ ಹೂಡಿದ್ದಾರೆ. ಇವರೊಂದಿಗೆ ಕವಿತಾ ಕನ್ನಿಕಾಪೂಜಾರಿ ಸೇರಿಕೊಂಡಿದ್ದಾರೆ.