Manada kadalu movie release on march 28th. “ಮನದಕಡಲು” ಚಿತ್ರ ಮಾರ್ಚ್ 28ರಂದು ರಾಜ್ಯದಾದ್ಯಂತ ತೆರೆಗೆ

ಈ ವಾರ ತೆರೆಗೆ ಇ.ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಮನದ ಕಡಲು”* .

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ “ಮನದ ಕಡಲು” ಚಿತ್ರ ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ.

ಜಿ.ಗಂಗಾಧರ್ ಅವರ ಸಹ ನಿರ್ಮಾಣ ಹಾಗೂ ಪ್ರತಾಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ ಈ ಚಿತ್ರ ಈಗಾಗಲೇ ಟೀಸರ್,‌ ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ.

ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ‌ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿರುವ “ಮನದ ಕಡಲು” ಚಿತ್ರಕ್ಕೆ ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ.
.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor