Nikil kumaraswamy acted with duniya vijay ನಿಖಿಲ್ ಕುಮಾರ್ ಅಭಿನಯದ ಚಿತ್ರದಲ್ಲಿ‌ ದುನಿಯಾ ವಿಜಯ್ .

ನಿಖಿಲ್ ಕುಮಾರ್ ಅಭಿನಯದ ಚಿತ್ರದಲ್ಲಿ‌ ದುನಿಯಾ ವಿಜಯ್ .

ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.

ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor