Parishuddham Movie 25th days Celebration. ಪರಿಶುದ್ಧಂ ಯಶಸ್ವಿ 25ನೇ ಹೆಜ್ಜೆ
ಪರಿಶುದ್ಧಂ ಯಶಸ್ವಿ 25ನೇ ಹೆಜ್ಜೆ
ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರವು ಕಳೆದ ತಿಂಗಳು ಬಿಡುಗಡೆಗೊಂಡಿದೆ. ಎಲ್ಲಾ ಕಡೆಗಳಿಂದಲೂ ಉತ್ತಮ ಪ್ರತಿಕ್ರಿಯೆ ಬರುತ್ತಿರುವುದರಿಂದ ತಂಡಕ್ಕೆ ಸಂತಸ ತಂದಿದೆ. ಅದರಲ್ಲೂ ಸಿನಿಮಾಕ್ಕೆ ಕಥೆ,ಸಾಹಿತ್ಯ, ಸಂಗೀತ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಪಾಲುದಾರುರಾಗಿರುವ ಆರೋನ್ ಕಾರ್ತಿಕ್‌ವೆಂಕಟೇಶ್ ಅವರ ಶ್ರಮ ನಿಜಕ್ಕೂ ಸಾರ್ಥಕ ಅನಿಸಿದೆ. ಪ್ರಾರಂಭದಿಂದ ಕೊನೆತನಕ ಎಲ್ಲಾ ಜವಬ್ದಾರಿಗಳನ್ನು ನಿಭಾಯಿಸಿದ್ದು ಯಶಸ್ಸಿಗೆ ಕಾರಣವಾಗಿದೆ.

ಮೊನ್ನೆಯಷ್ಟೇ ಯಶಸ್ವಿ 25 ದಿನಗಳನ್ನು ಪೂರೈಸಿದ್ದರಿಂದ ತಂಡವು ಚಿತ್ರಮಂದಿರದಲ್ಲಿ ಪ್ರೇಕ್ಷಕರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮವನ್ನು ಆಚರಿಸಿಕೊಂಡಿದ್ದಾರೆ. ನಟಿ ಕಲ್ಪನಾರಂತೆ ಸ್ಪರ್ಶಾರೇಖಾ ತೂಕದ ಪಾತ್ರವನ್ನು ನಿರ್ವಹಿಸಿದ್ದಾರೆ. ಅತಿಥಿಯಾಗಿ ಎಂ.ಡಿ.ಕೌಶಿಕ್ ಕೊನೆ ದೃಶ್ಯದಲ್ಲಿ ಬರಲಿದ್ದು, ಭಾಗ-2ರಲ್ಲಿ ಇವರಿಂದಲೇ ಸಿನಿಮಾವು ಶುರುವಾಗುತ್ತದೆ ಅಂತ ಬಿಂಬಿಸಲಾಗಿದೆ.

ರೋಹನ್‌ಕಿಡಿಯಾರ್ ಬಂಡವಾಳ ಹೂಡುವ ಜತೆಗೆ ಸ್ವರ್ಶಾರೇಖಾ ಅವರಿಗೆ ಜೋಡಿಯಾಗಿ ನಟಿಸಿದ್ದಾರೆ. ಕುಮಾರ್‌ರಾಥೋಡ್ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ತಾರಾಗಣದಲ್ಲಿ ದಿಶಾಪೂವಯ್ಯ ಉಳಿದಂತೆ ಯತಿರಾಜ್,ಭಾರ್ಗವ್, ಅರ್ಚನಾ, ವಿಕ್ಟರಿವಾಸು, ಕುರಿರಂಗ, ಮೈಸೂರುರಮಾನಂದ್, ರಾಜ್‌ಚರಣ್, ದುಬೈರಫೀಕ್ ಮುಂತಾದವರು ಅಭಿನಯಿಸಿದ್ದಾರೆ. ಸಂಕಲನ ನಿಖಿಲ್, ಸಂಭಾಷಣೆ ವಿನಯ್‌ಮೂರ್ತಿ, ಸಾಹಸ ರಾಮ್‌ದೇವ್, ನೃತ್ಯ ಕಿಶೋರ್ ಅವರದಾಗಿದೆ. ಈ ವರ್ಷದ ಹಿಟ್ ಲಿಸ್ಟ್‌ದಲ್ಲಿ ಪರಿಶುದ್ಧಂ ಸೇರುವ ಲಕ್ಷಣಗಳು ಗೋಚರಿಸುತ್ತಿದೆ.