Powder movie postpone ಪೌಡರ್ ಚಿತ್ರವನ್ನು ಮುಂದೂಡಲಾಗಿದೆ

KRG ನಿರ್ಮಾಣದ ಪೌಡರ್’ ಚಿತ್ರ .ಆಗಸ್ಟ್ 15ಕ್ಕೆ ರಿಲೀಸ್ ಆಗುವ ಬದಲು ಆಗಷ್ಟ್ 23ಕ್ಕೆ ತೆರೆಗೆ ಬರಲಿದೆ.

‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ‌ 23ಕ್ಕೆ ತೆರೆಗೆ ಬರಲಿದೆ ಸಿನಿಮಾ

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್. ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲು ಸಿದ್ಧವಾಗಿತ್ತು. ಅದಕ್ಕಾಗಿ ಚಿತ್ರತಂಡ ಭರದ ಪ್ರಚಾರ ಕಾರ್ಯ ಕೂಡ ನಡೆಸಿತ್ತು. ಆದರೆ ಈಗ ಪೌಡರ್ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ.

ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ. .ಕೆಆರ್ ಜಿ ಸಂಸ್ಥಾಪಕಾರದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಪೌಡರ್ ರಿಲೀಸ್ ದಿನಾಂಕವನ್ನು ಮುಂಡೂಡಿದ್ದಾರೆ.

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor