Powder movie pre release event. ಫೀನಿಕ್ಸ್ ಮಾಲ್ ಆಫ್ ಏಷಿಯಾದಲ್ಲಿ “ಪೌಡರ್ ಹಬ್ಬ”

ಅದ್ದೂರಿಯಾಗಿ ನಡೆದ “ಪೌಡರ್ ಹಬ್ಬ”
: ಫೀನಿಕ್ಸ್ ಮಾಲ್ ಆಫ್ ಏಷಿಯಾದಲ್ಲಿ ಪೌಡರ್ ಪ್ರೀ ರಿಲೀಸ್ ಕಾರ್ಯಕ್ರಮ

ಬಹು ನಿರೀಕ್ಷಿತ ಹಾಸ್ಯ ಚಟಾಕಿ ಚಿತ್ರ “ಪೌಡರ್” ತನ್ನ ಪ್ರೀ ರಿಲೀಸ್ ಕಾರ್ಯಕ್ರಮವಾದ “ಪೌಡರ್ ಹಬ್ಬ”ದಿಂದ ಮತ್ತೊಮ್ಮೆ ಸುದ್ದಿಯಾಗಿದೆ‌. ಆಗಸ್ಟ್ 15ರಂದು ಫೀನಿಕ್ಸ್ ಮಾಲ್ ಆಫ್ ಏಷಿಯಾದಲ್ಲಿ ನಡೆದ “ಪೌಡರ್ ಹಬ್ಬ” ಕನ್ನಡ ಚಿತ್ರರಂಗದ ತಾರಾ ಸಮಾಗಮವೇ ಆಗಿತ್ತು‌.

ಪೌಡರ್ ಹಬ್ಬದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್, ರೋರಿಂಗ್ ಸ್ಟಾರ್ ಶ್ರೀಮುರಳಿ, ದಾನಿಷ್ ಸೇಠ್, ಖ್ಯಾತ ನಟಿ ಐಂದ್ರಿತಾ ರೈ, ಹೆಸರಾಂತ ನಿರ್ದೇಶಕ ರೋಹಿತ್ ಪದಕಿ ಸೇರಿದಂತೆ ಪೌಡರ್ ತಾರಾಬಳಗ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ,ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ರವಿಶಂಕರ್ ಗೌಡ ಎಲ್ಲರೂ ವೀಕ್ಷಕರ ಗಮನ ಸೆಳೆದರು. ವಾಸುಕಿ ವೈಭವ್ ಮತ್ತು ಎಂ ಸಿ ಬಿಜ್ಜುವಿನ ಸಂಗೀತ ಕಾರ್ಯಕ್ರಮ ಎಲ್ಲರನ್ನು ಆಕರ್ಷಿಸಿತು.

“ಪೌಡರ್” ಒಂದು ಹಾಸ್ಯಭರಿತ ಚಿತ್ರವಾಗಿದ್ದು, ಇದನ್ನು ಜನಾರ್ದನ್ ಚಿಕ್ಕಣ್ಣ ನಿರ್ದೇಶಿಸಿರುತ್ತಾರೆ‌‌. ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ನಾಗಭೂಷಣ್, ರವಿಶಂಕರ್ ಗೌಡ ಮುಂತಾದವರು ನಟಿಸಿರುತ್ತಾರೆ.

ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ ಮತ್ತು ಚಿತ್ರವನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. “ಪೌಡರ್” ಚಿತ್ರ ಇದೇ ಆಗಸ್ಟ್ 23ರಂದು ತೆರೆ ಕಾಣಲಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor