Rag Raghava movie updates. ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!
ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!
ಮಿಲಿಂದ್ – ರೆಚೆಲ್ ಡೇವಿಡ್ ಅಭಿನಯದ ಈ ಚಿತ್ರ ಫೆಬ್ರವರಿ 7 ರಂದು ಬಿಡುಗಡೆ ..

ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರ ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಬಿಡುಗಡೆಗೂ ಪೂರ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಾಯಕ ಮಿಲಿಂದ್, ನಿರ್ಮಾಪಕ ಮಂಜುನಾಥ್ ದಾಸೇಗೌಡ ಹಾಗೂ ಚಿತ್ರತಂಡದ ಸದಸ್ಯರು ಶ್ರೀಮಂಜುನಾಥಸ್ವಾಮಿಯ ದರ್ಶನ ಮಾಡಿ, ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.