Rajayoga movie release on 17th November. ಈ ವಾರ ರಾಜಯೋಗ ಬಿಡುಗಡೆ

ಈವಾರ ರಾಜಯೋಗ ಬಿಡುಗಡೆ

ಈವರೆಗೆ ಹಲವಾರು ಚಲನಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದ ನಟ ಧರ್ಮಣ್ಣ ಕಡೂರು ಮೊದಲಬಾರಿಗೆ ನಾಯಕನಾಗಿ ನಟಿಸಿರುವ ಚಿತ್ರ ರಾಜಯೋಗ ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.
ಲಿಂಗರಾಜ ಉಚ್ಚಂಗಿದುರ್ಗ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶ್ರೀರಾಮರತ್ನ ಪ್ರೊಡಕ್ಷನ್ಸ್ ಮೂಲಕ ಕುಮಾರ ಕಂಠೀರವ, ದೀಕ್ಷಿತ್ ಕೃಷ್ಣ, ಪ್ರಭು ಚಿಕ್ಕನಾಯ್ಕನಹಳ್ಳಿ, ಲಿಂಗರಾಜು ಕೆಎನ್, ನೀರಜ್ ಗೌಡ ಅಲ್ಲದೆ ಧರ್ಮಣ್ಣ ಕಡೂರು ಸೇರಿ ನಿರ್ಮಾಣ ಮಾಡಿದ್ದಾರೆ.


ನಿನ್ನೆಯ ಬಗ್ಗೆ, ನಾಳೆಯ ಕುರಿತು ಯೋಚಿಸದೆ, ಪ್ರೆಸೆಂಟ್ ಲೈಫ್ ಮೇಲೆ ಗಮನ ಹರಿಸಿದರೆ ನಮ್ಮ ಜೀವನ ಚೆನ್ನಾಗಿರುತ್ತದೆ ಎಂಬ ಸಂದೇಶ ಹೊತ್ತಿ ಬರುತ್ತಿರುವ ಈ ಚಿತ್ರಕ್ಕೆ ೩ ಹಂತಗಳಲ್ಲಿ ೪೫ ದಿನಗಳವರೆಗೆ ಚಿತ್ರೀಕರಿಸಲಾಗಿದೆ. ಕೆ.ಎ.ಎಸ್. ಎಕ್ಸಾಂ ಬರೆಯಲು ಹೊರಟ ನಾಯಕ ಕೊನೆಗಾದರೂ ಬರೀತಾನಾ ಇಲ್ವಾ ಅನ್ನೋದೇ ಚಿತ್ರದ ಕಥೆ. ನಾಯಕನ ಪಾತ್ರದಲ್ಲಿ ನಟ ಧರ್ಮಣ್ಣ ಕಾಣಿಸಿಕೊಂಡರೆ, ನಿರೀಕ್ಷಾರಾವ್ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ.
ಅಕ್ಷಯ್ ರಿಶಭ್ ಅವರ ಸಂಗೀತ, ವಿಷ್ಣುಪ್ರಸಾದ್ ಅವರ ಕ್ಯಾಮೆರಾ, ಬಿ.ಎಸ್. ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ, ನಾಗೇಂದ್ರ ಶಾ, ಕೃಷ್ಣ ಮೂರ್ತಿ ಕವುತಾರ್, ಶ್ರೀನಿವಾಸಗೌಡ್ರು, ಉಷಾ ರವಿಶಂಕರ್, ಮಹಾಂತೇಶ ಹಿರೇಮಠ್ ಚಿತ್ರದ ಪ್ರಮುಖ ಪಾತ್ರವರ್ಗದಲ್ಲಿದ್ದಾರೆ,

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor