Ram Charan acted new movie The Indian house Pooja ceremony in Hampi Virupaksha Temple Karnataka. ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯನ್ ಹೌಸ್’ ಸಿನಿಮಾ
ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯನ್ ಹೌಸ್’ ಸಿನಿಮಾ
ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯನ್ ಹೌಸ್’ಗೆ ಮುಹೂರ್ತದ ಸಂಭ್ರಮ.. ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ಸಿನಿಮಾ

RRR ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ , ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ತಮ್ಮ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕತೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ದಿ ಇಂಡಿಯಾ ಹೌಸ್ ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಇಂದು ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ದಿ ಇಂಡಿಯಾ ಹೌಸ್ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ದಿ ಕಾಶ್ಮೀರಿ ಫೈಲ್ಸ್, ಕಾರ್ತಿಕೇಯ-2 ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ಹಾಗೂ ರಾಮ್ ಚರಣ್ ಒಡೆತನದ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಈ ಚಿತ್ರ ನಿರ್ಮಿಸುತ್ತಿದೆ. ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಘಟನೆಗಳನ್ನು ಆಧರಿಸಿ ‘ದಿ ಇಂಡಿಯಾ ಹೌಸ್’ ವನ್ನು ಕಟ್ಟಿಕೊಡಲಾಗುತ್ತಿದೆ. ಸಿನಿಮಾದಲ್ಲಿ ನಾಯಕ ನಿಖಿಲ್ ಶಿವನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮ್ ವಂಶಿ ಕೃಷ್ಣ ನಿರ್ದೇಶನದ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಅನುಪಮ್ ಅವರು ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪಾತ್ರ ನಿರ್ವಹಿಸಲಿದ್ದಾರೆ. ನಿಖಿಲ್ ಸಿದ್ದಾರ್ಥ್ ಗೆ ಜೋಡಿಯಾಗಿ ಸಾಯಿ ಮಂಜ್ರೇಕರ್ ಬಣ್ಣ ಹಚ್ಚಲಿದ್ದಾರೆ.

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರುತ್ತಿರು ದಿ ಇಂಡಿಯನ್ ಹೌಸ್ ಸಿನಿಮಾಗೆ ಕ್ಯಾಮೆರಾನ್ ಬ್ರೈಸನ್ ಕ್ಯಾಮೆರಾ ಹಿಡಿಯಲಿದ್ದಾರೆ. ಕಾರ್ತಿಕೇಯ 2 ನಂತರ ನಿಖಿಲ್, ಅನುಪಮ್ ಖೇರ್, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಜೊತೆ ದಿ ಇಂಡಿಯಾ ಹೌಸ್ ಸಿನಿಮಾಗಾಗಿ ಮತ್ತೊಮ್ಮೆ ಒಂದಾಗಿದ್ದಾರೆ. ಈ ಚಿತ್ರದ ರೆಗ್ಯುಲರ್ ಶೂಟಿಂಗ್ ನಾಳೆಯಿಂದ ಶುರುವಾಗಲಿದೆ.