Romantic comedy Horror movie dilkush release on 22 march 2024.ಮಾರ್ಚ್ 22 ರಂದು ಬಿಡುಗಡೆಯಾಗಲಿದೆ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್”

ಮಾರ್ಚ್ 22 ರಂದು ಬಿಡುಗಡೆಯಾಗಲಿದೆ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್”

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಹಾಗೂ ಪ್ರಮೋದ್ ಜಯ ನಿರ್ದೇಶನದ “ದಿಲ್ ಖುಷ್” ಚಿತ್ರ ಇದೇ ಮಾರ್ಚ್ 22 ರಂದು ತೆರೆಗೆ ಬರಲಿದೆ.

ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್” ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ.

ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.

ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ. ಪ್ರದ್ಯೋತನ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿರುವ “ದಿಲ್ ಖುಷ್” ಚಿತ್ರದ ನಾಯಕನಾಗಿ ರಂಜಿತ್ ನಟಿಸಿದ್ದಾರೆ. ಸ್ಪಂದನ ಸೋಮಣ್ಣ ಈ ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor