Sambhavami yuge yuge movie release on June 21st. ಸಂಭವಾಮಿ ಯುಗೇ ಯುಗೇ ಚಿತ್ರ ಜೂನ್ 21ರಂದು ತೆರೆಗೆ ಬರಲು ಸಿದ್ಧ

ಸಂಭವಾಮಿ ಯುಗೇ ಯುಗೇ ಚಿತ್ರ ಜೂನ್ 21ರಂದು ತೆರೆಗೆ ಬರಲು ಸಿದ್ಧ

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರ ಜೂನ್ 21ರಂದು ರಾಜ್ಯದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು.

ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ್ದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿರುವ ಈಗೇತೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಂದ ಮೆಚ್ಚುಗೆಯನ್ನು ಪಡೆದಿದೆ.

ಇದು ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇದೊಂದು ಹಳ್ಳಿ ಹಿನ್ನೆಲೆಯ ಚಿತ್ರ. ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸಿದರೆ. ಹಳ್ಳಿ ಉಳಿಯುವುದು ಹೇಗೆ? ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲಸಬೇಕು ಎಂಬುದೆ ಚಿತ್ರದ ಕಥಾ ಸಾರಾಂಶ. ಈ ಹಿಂದೆ ಕನ್ನಡಿಗರ ಆರಾಧ್ಯ ಧೈವ ಡಾ, ರಾಜಕುಮಾರ್ ರವರ “ಬಂಗಾರದ ಮನುಷ್ಯ” ಚಿತ್ರ ಇದೇ ರೀತಿಯ ಸಂದೇಶವನ್ನು ಹೊತ್ತು ತಂದ ಚಿತ್ರವಾಗಿತ್ತು. ಇದರಿಂದಾಗಿ ಅಂದು ಅದೆಷ್ಟೋ ಯುವಕರು ಮತ್ತೆ ಹಳ್ಳಿಗೆ ವಾಪಸ್ಸಾಗಿ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಅದೇ ರೀತಿಯಲ್ಲಿ ಈ ಚಿತ್ರವೂ ಕೂಡ ಇಂದಿನ ಸಮಾಜಕ್ಕೆ ಹೊಸ ಆಂದೋಲನವನ್ನು ಹುಟ್ಟಿ ಹಾಕಲಿ , ಜೂನ್‍ 21ಕ್ಕೆ ಚಿತ್ರ ಬಿಡುಗಡೆ ಆಗಲಿದೆ ಪ್ರೇಕ್ಷಕರು ಚಿತ್ರವನ್ನು‌ ನೋಡಿ ಕನ್ನಡ ಚಿತ್ರ ರಂಗವನ್ನು ಮತ್ತು ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಲಿ ಎಂಬುದು ನಮ್ಮ ಆಶಯ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor