Sensor officer recommended U/A certificate For Satyam Movie. ಸತ್ಯಂ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೇಟ್.

ಸೆನ್ಸಾರ್ ಮೆಚ್ಚಿದ ಸತ್ಯಂ

ಅಶೋಕ್ ಕಡಬ ಅವರ ನಿರ್ದೇಶನದ, ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ 

‘ಸತ್ಯಂ’ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರದ ಕಾನ್ಸೆಪ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ.
ಕೆಂಪ, ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಕನ್ನಡತಿ ಖ್ಯಾತಿಯ ರಂಜನಿ ರಾಘವನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸತ್ಯಂ ಮಾಸ್ ಚಿತ್ರವಾದರೂ ತುಳುನಾಡಿನ ದೈವಾರಾಧನೆಯ ಬಗ್ಗೆ ಒಂದು ಎಳೆ ಈ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ. ಕಾಂತಾರ ಚಿತ್ರಕ್ಕೂ ಮುನ್ನವೇ ಸತ್ಯಂ ಕಥೆಯನ್ನು ರೆಡಿ ಮಾಡಿಕೊಂಡಿದ್ದಾಗಿ ನಿರ್ದೇಶಕರೇ ಹೇಳಿದ್ದಾರೆ.
ಸೆನ್ಸಾರ್ ಅಧಿಕಾರಿಗಳು ಹಲವಾರು ಚಿತ್ರಗಳನ್ನು ವೀಕ್ಷಿಸುತ್ತಾರೆ. ಅದರ ನಡುವೆ ಹೊಸತನದಿಂದ ಕೂಡಿದ ಚಿತ್ರ ನೋಡಿದಾಗ ಅವರ ಪ್ರತಿಕ್ರಿಯೆ ಬೇರೆಥರ ಇರುತ್ತದೆ. ಅಂದಹಾಗೆ, ಯಾವುದೇ ಕಟ್, ಮ್ಯೂಟ್ ಇಲ್ಲದೆ ಈ ಚಿತ್ರ ಸೆನ್ಸಾರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದೆ.


ಶ್ರೀ ಮಾತಾ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ ಸತ್ಯಂ ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ, ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳುವಂಥ ಕಥೆ ಸತ್ಯಂ ಚಿತ್ರಕ್ಕಿದೆ. ಕೆಜಿಎಫ್. ಖ್ಯಾತಿಯ ರವಿ ಬಸ್ರೂರು ಈ ಚಿತ್ರದ ಸಂಗೀತ ನಿರ್ದೇಶನ ಮಾಡಿದರೆ. ಸಿನೆಟೆಕ್ ಸೂರಿ ಛಾಯಾಗ್ರಹಣ ನಿರ್ವಹಿಸಿದ್ದಾರೆ. ತೆಲುಗು ನಟ ಸುಮನ್, ಸೈಯಾಜಿ ಶಿಂಧೆ, ಪವಿತ್ರಾ ಲೋಕೇಶ್, ಅವಿನಾಶ್, ವಿನಯಾ ಪ್ರಸಾದ್, ಮುಖ್ಯಮಂತ್ರಿ ಚಂದ್ರು, ಎಂ.ಎನ್. ಲಕ್ಷ್ಮಿದೇವಿ, ಶೃಂಗೇರಿ ರಾಮಣ್ಣ, ತನುಶ್ರೀ, ಎಂ.ಎಸ್. ಉಮೇಶ್, ಬಸವರಾಜ್ ಕಟ್ಟಿ, ಮೀನಾಕ್ಷಿ ಮುಂತಾದವರ ತಾರಾಗಣ ಸತ್ಯಂ ಚಿತ್ರಕ್ಕಿದೆ. ಐಪಿಎಲ್ ನಂತರ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಸಿದ್ದತೆ ನಡೆಸಿದೆ. ಶೀಘ್ರದಲ್ಲೇ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗಲಿದೆ,

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor