the suit movie release on May 17th. “ದ ಸೂಟ್” ಚಿತ್ರ ಮೇ17 ರಂದು ರಾಜ್ಯದಾದ್ಯಂತ ತೆರೆಗೆ.

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ .

“ದ ಸೂಟ್” ಟ್ರೇಲರ್ ನೋಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ .

ನಾವು ಧರಿಸುವ ಉಡುಗೆಗಳಲ್ಲಿ “ಸೂಟ್” ಗೆ ಅದರದೆ ಆದ ವಿಶೇಷತೆ ಇದೆ. ಈ “ಸೂಟ್” ನ ಕುರಿತಂತೆ “ದ ಸೂಟ್” ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ “ದ ಸೂಟ್” ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.‌ ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಸೂಟ್” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಶಾಸಕ ಗೋಪಾಲಯ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಪ್ರಶಾಂತ್ ಚಕ್ರವರ್ತಿ ಮುಂತಾದ ಗಣ್ಯರು “ದ ಸೂಟ್” ಆಗಮಿಸಿ ಶುಭ ಕೋರಿದರು.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಈ ಚಿತ್ರದ ಟ್ರೇಲರ್ ನೋಡಿ ಖುಷಿಪಟ್ಟಿದ್ದಾರೆ‌. ಚಿತ್ರ ಯಶಸ್ವಿಯಾಗಲಿ ಎಂದು ವಿಡಿಯೋ ಮೂಲಕ ಶುಭ ಹಾರೈಸಿದ್ದಾರೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಿರ್ಮಾಪಕಿ ಮಾಲತಿ ಗೌಡ ಸಮಾರಂಭಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ, ನಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ ಎಂದರು. ಮಾಲತಿ ಗೌಡ ಅವರ ಪತಿ ರಾಮಸ್ವಾಮಿ ಈ ಚಿತ್ರದ ನಿರ್ಮಾಪಕರು.

ನಿರ್ದೇಶಕ ಎಸ್. ಭಗತ್ ರಾಜ್ ಮಾತನಾಡಿ, ನಾನು ಖ್ಯಾತ ನಟ, ನಿರ್ದೇಶಕ ಕಾಶಿನಾಥ್ ಅವರ ಬಳಿ ನಿರ್ದೇಶನ ಕಲಿತಿದ್ದೀನಿ. ಅವರು ನನ್ನ ಗುರುಗಳು .” ದ ಸೂಟ್” ನನ್ನ ಮೊದಲ ನಿರ್ದೇಶನದ ಚಿತ್ರ. “ಸೂಟ್”, ಬದುಕು ಹಾಗೂ ಭಾವನೆಗಳ ಸಂಗಮ. ನಮ್ಮ ಚಿತ್ರಕ್ಕೆ ಸೂಟೇ ಕಥಾನಾಯಕ. ಕಥೆ ಕೇಳಿದ ಕೆಲವರು ಈ ವಿಷಯ ಕೇಳಿ ಆಶ್ಚರ್ಯಪಟ್ಟಿದ್ದು ಉಂಟು. ಆದರೆ ನಮ್ಮ ಚಿತ್ರದಲ್ಲಿ ” ಸೂಟ್” ನ ಪಾತ್ರವೇನು? ಎಂಬುದು ಮೇ 17 ರಂದು ತಿಳಿಯಲಿದೆ. “ಸೂಟ್” ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು “ಸೂಟ್” ನ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. ಚಿತ್ರಕ್ಕೆ ಅತಿಥಿದೇವೋಭವ ಎಂಬ ಅಡಿಬರಹವಿದೆ.

“ಸೂಟ್” ಚಿತ್ರದ ಪ್ರಚಾರವನ್ನು ವಿನೂತನವಾಗಿ ಮಾಡಿದ್ದೇವೆ‌. “ಸೂಟ್” ನ ಬಗ್ಗೆ ಅನೇಕ ಗಣ್ಯರು ತಮ್ನಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ನಮ್ಮ ಚಿತ್ರದಲ್ಲಿ ಮೂರು ಕಿರಣಗಳಿದೆ. ಸಂಗೀತ ನಿರ್ದೇಶಕ ಕಿರಣ್ ಶಂಕರ್, ಛಾಯಾಗ್ರಾಹಕ ಕಿರಣ್ ಹಂಪಾಪುರ ಹಾಗೂ ರೇಖಾಚಿತ್ರಗಳ ಮೂಲಕ ನಮ್ಮ ಚಿತ್ರಕ್ಕೆ ಜೀವ ತುಂಬಿರುವ ಕಿರಣ್ ಅವರು. ಈ ಚಿತ್ರದಲ್ಲಿ ಕಮಲ್, ಉಮೇಶ್ ಬಣಕಾರ್, ವಿ.ನಾಗೇಂದ್ರ ಪ್ರಸಾದ್, ಜೋಸೆಫ್, ಸುಜಯ್, ಭೀಷ್ಮ ರಾಮಯ್ಯ, ಗಡ್ಡ ವಿಜಿ. ಪ್ರಣಯ ಮೂರ್ತಿ ಸೇರಿದಂತೆ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ ಎಂದರು.

ದುಬೈನಿಂದ ಬಂದು ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಮ್ಯಾನೇಜರ್ ಆಗಿದ್ದ ನಟ ಕಮಲ್ ಅವರು “ದ ಸೂಟ್” ಚಿತ್ರದ ತಮ್ಮ ಜರ್ನಿಯ ಬಗ್ಗೆ ವಿವರಣೆ ನೀಡಿದರು. ಪ್ರೊಡಕ್ಷನ್ ಎಕ್ಸಿಕ್ಯುಟಿವ್ ರವಿಶಂಕರ್, ಕಲಾವಿದರಾದ ಮಂಜು ಪಾಟೀಲ್. ಸುಜಯ್, ಭೀಷ್ಮ ರಾಮಯ್ಯ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor