Tovino Thomas acted arm teaser released by Rakshith Shetty “ಟೊವಿನೋ ಥಾಮಸ್ ನಟನೆಯ ARM ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ”

*ಮಾಲಿವುಡ್ ಸ್ಟಾರ್ ಗೆ ಸಾಥ್ ಕೊಟ್ಟ ಸಿಂಪಲ್ ಸ್ಟಾರ್…ಟೊವಿನೋ ಥಾಮಸ್ ನಟನೆಯ ARM ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ*

ಮಿನ್ನಲ್ ಮುರಳಿ ಎಂಬ ಸೂಪರ್ ಹೀರೋ ಸಿನಿಮಾ ಮೂಲಕ ಖ್ಯಾತಿ ಪಡೆದಿರುವ ಟೊವಿನೋ ಥಾಮಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅಜಯಂತೆ ರಂದಂ ಮೋಷನಂ ಟೀಸರ್ ರಿಲೀಸ್ ಆಗಿದೆ. ಹಿಂದಿಯಲ್ಲಿ ಹೃತಿಕ್ ರೋಷನ್, ತೆಲುಗಿನಲ್ಲಿ ನಾನಿ, ತಮಿಳಿನಲ್ಲಿ ಲೋಕೇಶ್ ಕನಕರಾಜ್ ಮತ್ತು ಆರ್ಯ, ಕನ್ನಡದಲ್ಲಿ ರಕ್ಷಿತ್ ಶೆಟ್ಟಿ, ಮಲಯಾಳಂ ಪೃಥ್ವಿರಾಜ್ ಸುಕುಮಾರನ್ ಸೋಷಿಯಲ್ ಮೀಡಿಯಾ ಮೂಲಕ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ಟೊವಿನೋ ಥಾಮಸ್ ಮಾಸ್ ಅವತಾರ ತಾಳಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಘಟನೆ ಸುತ್ತ ಇಡೀ ಟೀಸರ್ ಸಾಗುತ್ತದೆ. ಟೊವಿನೋ ಥಾಮಸ್ ವೃತ್ತಿ ಜೀವನದ ಬಹುವಿಶೇಷ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ. ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.

ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ. ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಶೆಟ್ಟಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ಟೊವಿನೋ ಥಾಮಸ್ ಜೋಡಿಯಾಗಿ ಕೃತಿ ನಟಿಸುತ್ತಿದ್ದು, ಉಳಿದಂತೆ ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor