“ರಾಜ್ಯಾದ್ಯಂತ “ವರದ” ಬರ್ತಾವ್ನೆ ದಾರಿ ಬಿಡ್ರಪ್ಪ!

ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಸುನಿತಾ ಪ್ರಕಾಶ್ ಚಿತ್ರದ ಸಹ ನಿರ್ಮಾಪಕರಾಗಿರುವ
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರ ಇದೇ ಫೆಬ್ರವರಿ 18 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ.

ಈಗಾಗಲೆ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.

“ರಾಬರ್ಟ್” ಚಿತ್ರದ ನಂತರ ವಿನೋದ್ ಅಭಿಮಾನಿಗಳು ಅವರ ಚಿತ್ರವನ್ನು ನೋಡಲು ಕಾಯುತ್ತಿದ್ದರು, ಈಗ ಚಿತ್ರ ಬಿಡುಗಡೆಯ ದಿನಾಂಕ ಗೊತ್ತಾಗುತ್ತಿದ್ದಂತೆ ಅವರಲ್ಲಿ ಖುಷಿ ಮನೆ ಮಾಡಿದೆ ಎನ್ನಬಹುದು.
ಅಮಿತ ನಾಯಕಿಯಾಗಿ ಅಭಿನಯಿಸುವ ಮೂಲಕ ವಿನೋದ್ ಗೆ ಸಾಥ್ ನೀಡಿದ್ದಾರೆ.

ಇನ್ನು ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದು, ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

ವಿನಾಯಕರಾಮ್ ಸಂಭಾಷಣೆ ಬರೆದಿದ್ದು, ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಲಿ ಎಂಬುದು ನಮ್ಮ ಆಶಯ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor