Yajamana Premier cricket League Jersey launch ವಿಷ್ಣು ನೆನಪಲ್ಲಿ ಮತ್ತೆ ಶುರು YPL…ಮೇ‌4 ಮತ್ತು ಮೇ‌ 5ಕ್ಕೆ ಯಜಮಾನ ಪ್ರೀಮಿಯರ್ ಲೀಗ್

ವಿಷ್ಣು ನೆನಪಲ್ಲಿ ಮತ್ತೆ ಶುರು YPL…ಮೇ‌4 ಮತ್ತು ಮೇ‌ 5ಕ್ಕೆ ಯಜಮಾನ ಪ್ರೀಮಿಯರ್ ಲೀಗ್

ಯಜಮಾನ ಪ್ರೀಮಿಯರ್ ಲೀಗ್ ಮತ್ತೆ ಬಂದಿದೆ. ಇದು ಅಭಿಮಾನಿಗಳಿಂದ ಅಭಿಮಾನಿಗಳಿಗಾಗಿ ಅಭಿಮಾನಿಗಳಿಗೋಸ್ಕರ್ ನಡೆಯುವ ಕ್ರಿಕೆಟ್ ಪಂದ್ಯಾವಳಿ. ಕಳೆದೆರೆಡು ವರ್ಷಗಳಿಂದ ಯಶಸ್ವಿ ಆಯೋಜಿಸಿಕೊಂಡು ಬರ್ತಿರುವ ವೈಪಿಎಲ್ ಮೇ 4 ಮತ್ತು 5 ರಂದು ಎರಡು ದಿನಗಳ ಕಾಲ‌ ನಡೆಯುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಎಂಎಂ ಲೆಗಸಿನಲ್ಲಿ ನಿನ್ನೆ ಜರ್ಸಿ ಬಿಡುಗಡೆ ಮಾಡಲಾಯಿತು. ನಟ ಜಯರಾಮ್ ಕಾರ್ತಿಕ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

ಇದೇ ವೇಳೆ ನಟ ಜಯರಾಮ್ ಕಾರ್ತಿಕ್ ಮಾತನಾಡಿ, ವಿಷ್ಣು ಸೇನಾ ಸಮಿತಿಗೆ ವಂದನೆಗಳು. ಇದು ಯಜಮಾನ ಪ್ರೀಮಿಯರ್ ಲೀಗ್ ನ ಮೂರನೇ ಸೀಸನ್. ಒಂದು ಕ್ರಿಕೆಟ್ ಪಂದ್ಯಾವಳಿ ನಡೆಸುವುದು ಕಷ್ಟ. ಇದೆಲ್ಲಾ ಫ್ಯಾನ್ಸ್ ಸೇರಿಕೊಂಡು ಮೂರು ವರ್ಷದ ಹಿಂದೆ ಶುರು ಮಾಡಿದರು. ಈಗ ಮೂರನೇ ಸೀಸನ್.‌ ನನ್ನ ಪ್ರೀತಿಯ ಅಚ್ಚುಮೆಚ್ಚಿನ ಆಕ್ಟರ್ ವಿಷ್ಣು ಸರ್ ಅವರ ಹೆಸರಿನಲ್ಲಿ ಪಂದ್ಯಾವಳಿ ನಡೆಯುತ್ತಿದೆ. ಯಜಮಾನ ಪ್ರೀಮಿಯರ್ ಲೀಗ್ ಟೈಟಲ್ ಚೆನ್ನಾಗಿದೆ. ಇದು ನಮ್ಮ ಹೃದಯಕ್ಕೆ ಹತ್ತಿರವಾಗಿದೆ. ನಮಗೆ ವಿಷ್ಣು ಸರ್ ಸ್ಫೂರ್ತಿ. ವೈಪಿಎಲ್ ನಲ್ಲಿ ಭಾಗವಹಿಸಲಿರುವ ಇಡೀ ತಂಡಕ್ಕೆ ಆಲ್ ದಿ ಬೆಸ್ಟ್ ಎಂದರು.

ಯದುನಂದನ್ ಗೌಡ ಮಾತನಾಡಿ, ಯಜಮಾನ ಪ್ರೀಮಿಯರ್ ಲೀಗ್ ನ ಮೂರು ವರ್ಷಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಶುರು ಮಾಡಿದ್ದೇವು.‌ ಪ್ರೀಮಿಯರ್, ಐಪಿಎಲ್ ಅಂತಾ ಕ್ರಿಕೆಟ್ ಪಂದ್ಯಾವಳಿ ಮಾಡುತ್ತಾರೆ. ನಾವು ಯಾಕೆ ವಿಷ್ಣು ಸರ್ ಹೆಸರಿನಲ್ಲಿ ಮಾಡಬಾರದು ಎಂದು ಅವರ ಹೆಸರಲ್ಲಿ ಶುರು ಮಾಡಿದೆವು. ಕನ್ನಡ ಇಂಡಸ್ಟ್ರೀಗೆ ಕ್ರಿಕೆಟ್ ಪರಿಚಯಿಸಿದ್ದು,ನಮ್ಮ ಯಜಮಾನರು. ವಿಷ್ಣು ಸರ್ ಕನಸುಗಳಿಗೆ ಬಣ್ಣ ಹಚ್ಚುವ ಕೆಲಸ ನಡೆಯುತ್ತಿಲ್ಲ. ಹೀಗಾಗಿ ಅಭಿಮಾನಿಗಳೇ ಸೇರಿಕೊಂಡು ಯಜಮಾನ ಪ್ರೀಮಿಯರ್ ಲೀಗ್ ಪ್ರಾರಂಭಿಸಿದೆವು. ಅಭಿಮಾನಿಗಳ ನಡುವಿನ ಸ್ಟಾರ್ ವಾರ್ ಹೊಡೆದು ಹಾಕಿ ಎಲ್ಲಾ ಅಭಿಮಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಕೆಲಸವನ್ನು ಯಜಮಾನ ಪ್ರೀಮಿಯರ್ ಲೀಗ್ ಮೂಲಕ ಮಾಡಲಾಗಿದೆ. ನಿಮ್ಮ ಸಹಕಾರ ಇದ್ದರೆ ಈ ಪಂದ್ಯಾವಳಿಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

ಬೆಂಗಳೂರಿನ ಅಶೋಕ್ ರೈಸಿಂಗ್ ಕ್ರಿಕೆಟ್ ಗ್ರೌಂಡ್ ನಲ್ಲಿ ಪಂದ್ಯಾವಳಿ ನಡೆಯಲಿದೆ. ಈ ಬಾರಿ ISPL ಮಾದರಿಯಲ್ಲಿ ಯಜಮಾನ ಪ್ರೀಮಿಯರ್ ಲೀಗ್ T10 ಟಚ್ ಕೊಡಲಾಗಿದೆ. ಪ್ರತಿ ತಂಡಗಳಿಗೂ ಮೆಂಟರ್ಸ್ ಗಳಿದ್ದು, ಶ್ರೇಯಸ್ ಮಂಜು, ಸಿಂಪಲ್ ಸುನಿ, ರೋಷನ್ ಬಚ್ಚನ್, ಜಯರಾಮ್ ಕಾರ್ತಿಕ್ ಸೇರಿದಂತೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಾಥ್ ಕೊಟ್ಟಿದ್ದಾರೆ. ವೈಪಿಎಲ್ ನ್ನು ವಿಷ್ಣು ಸೇನಾ ಸಮಿತಿಯ ಬೆಂಗಳೂರಿನ ಜಿಲ್ಲಾಧ್ಯಕ್ಷ ಯದುನಂದನ್ ಗೌಡ ನಡೆಸುತ್ತಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಸಿ ಮಲ್ಲಿಕಾರ್ಜುನ್ ಅವರಿಗೆ ಸಾಥ್ ಕೊಡುತ್ತಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣು ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜೊತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದೂ ಇದೆ. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor