Yathabhava posts Released. ಪೋಸ್ಟರ್ ಮೂಲಕ ಕುತೂಹಲ ಹುಟ್ಟಿಸಿದೆ “ಯಥಾಭವ”

*ಪೋಸ್ಟರ್ ಮೂಲಕ ಕುತೂಹಲ ಹುಟ್ಟಿಸಿದೆ “ಯಥಾಭವ”* .

*ಗೌತಮ್ ಬಸವರಾಜ್ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯ* .

ಕನ್ನಡದ ಪ್ರೇಕ್ಷಕರು ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಯಶಸ್ವಿಗೊಳಿಸುತ್ತಿದ್ದಾರೆ. ಅಂತಹ ಉತ್ತಮ ಕಂಟೆಂಟ್ ಹೊಂದಿರುವ ಮತ್ತೊಂದು ಚಿತ್ರ “ಯಥಾಭವ”.

ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ. ” ಯಥಾಭವ” ಚಿತ್ರದ ಪೋಸ್ಟರ್ ವಿಭಿನ್ನವಾಗಿದ್ದು ಕುತೂಹಲ ಮೂಡಿಸಿದೆ.

Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಉತ್ಸವ್ ಶ್ರೇಯ್ ಸಂಗೀತ ನಿರ್ದೇಶನ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸಂಚಿತ್ ಚವನ್ ನೃತ್ಯ ನಿರ್ದೇಶನ ಹಾಗೂ ಸ್ಮಿತ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ.

“ಯಥಾಭವ” ಕೋರ್ಟ್ ರೂಮ್ ಡ್ರಾಮ ಕಥಾಹಂದರ ಹೊಂದಿದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಪವನ್ ಶಂಕರ್ ಈ ಚಿತ್ರದ ನಾಯಕನಾಗಿ ಹಾಗೂ ಸಹನ ಸುಧಾಕರ್ ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಮೂಲಕ ಗೌತಮ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಹಿರಿಯ ನಟ ದತ್ತಣ್ಣ ನ್ಯಾಯಾಧೀಶರ ಪಾತ್ರ ನಿರ್ವಹಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಬಾಲ ರಾಜವಾಡಿ, ಮಾಸ್ಟರ್ ಸುಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor