YAVA MOHANA MURULI KAREYITU TITLE SONG RELEASE. ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ .

“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ .

ಹಾಡು ಬಿಡುಗಡೆ ಮಾಡಿ ಹಾರೈಸಿದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಟೈಟಲ್ ಸಾಂಗ್ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಅಂಗವಿಕಲ ಹುಡುಗಿ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್ ಸಿ.ಜೆ ಸಂಗೀತ ನೀಡಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ವಿಶ್ವಾಸ್ ಕೃಷ್ಣ ತಿಳಿಸಿದರು .

ನಾನು ಮೂಲತಃ ಉದ್ಯಮಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಹಾಡು ಬಿಡುಗಡೆ ಮಾಡಿಕೊಟ್ಟ ಉಮಾಪತಿ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಶರಣಪ್ಪ ಗೌರಮ್ಮ.


ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನಿಲ್ ಸಿ ಜೆ, ಟೈಟಲ್ ಸಾಂಗ್ ಕುರಿತು ಡಾ||ವಿ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಆನಂದ್ ಆಡಿಯೋ ಶ್ಯಾಮ್, ಗೀತರಚನೆಕಾರ ಗೌಸ್ ಫಿರ್ ಹಾಗೂ ರಾಕಿ (ಶ್ವಾನ) ಟ್ರೈನರ್ ಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ರಾಕಿ(ಶ್ವಾನ) ಸಹ ವೇದಿಕೆ ಮೇಲೆ ಕುಳಿತು ಸಮಾರಂಭ ವೀಕ್ಷಿಸಿದ್ದು ವಿಶೇಷವಾಗಿತ್ತು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor