Father movie motion poster released by kichha Sudeep. ಆರ್ ಸಿ ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರದ ಮೋಷನ್ ಪೋಸ್ಟರ್ ಕಿಚ್ಚ ಸುದೀಪ್ ರಿಂದ ಅನಾವರಣ

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” .

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಥ್ .

ಕೆಲವುದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರವಾಗಿ ” ಫಾದರ್” ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ “ಫಾದರ್” ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿದರು.

ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ, ನಟ ಅನೂಪ್ ರೇವಣ್ಣ, ಆನಂದ್ ಆಡಿಯೋ ಶ್ಯಾಮ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಪ್ಪ – ಮಗನ ಕುರಿತಾದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಕಾಶ್ ರೈ ಹಾಗೂ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ. ರಾಜ್ ಮೋಹನ್ ನಿರ್ದೇಶನ ಮಾಡಿದ್ದಾರೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ನಂತರ ಸುದೀಪ್ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಮಾತನಾಡಿದರು.

“ಫಾದರ್” ಚಿತ್ರದ ಮೋಷನ್ ಪೋಸ್ಟರ್ ಚೆನ್ನಾಗಿದೆ. ಆರ್ ಚಂದ್ರು ನನ್ನ ಸ್ನೇಹಿತ. ಅವರೊಟ್ಟಿಗೆ ಸದಾ ನಾನಿರುತ್ತೇನೆ‌. ಚಿತ್ರದಲ್ಲಿ ನಟಿಸಿರುವ ಕೃಷ್ಣ, ಅಮೃತ ಎಲ್ಲಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಒಳ್ಳೆಯದಾಗಲಿ ಎಂದು ಸುದೀಪ್ ಹಾರೈಸಿದರು.

ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದ ತಿಳಿಸುತ್ತಾ ಮಾತು ಆರಂಭಿಸಿದ ನಿರ್ಮಾಪಕ ಆರ್ ಚಂದ್ರು, 22 ವರ್ಷಗಳ ಹಿಂದೆ 100 ರೂಪಾಯಿ ಇಟ್ಟುಕೊಂಡು ಬೆಂಗಳೂರಿಗೆ ಬಂದ ನಾನು, ಈಗ “ಕಬ್ಜ” ದಂತಹ 100 ಕೋಟಿ ಸಿನಿಮಾ ಮಾಡಿದ್ದೇನೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ನಾನು ಆಬಾರಿ. ಈ ಹಿಂದೆ ಸಿದ್ದೇಶ್ವರ ಎಂಟರ್ ಪ್ರೈಸಸ್ ಬ್ಯಾನರ್ ನಲ್ಲಿ 12 ಚಿತ್ರಗಳನ್ನು ನಿರ್ಮಿಸಿದ್ದ ನಾನು, ಈಗ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ್ದೇನೆ.

ಈ ಸಂಸ್ಥೆಯ ಮೊದಲ ಚಿತ್ರ “ಫಾದರ್”. ಅಪ್ಪ – ಮಗನ ಬಂಧವ್ಯದ ಕುರಿತಾದ ಸಿನುಮಾವಿದು. ನಿರ್ದೇಶಕ ರಾಜ್ ಮೋಹನ್ ಅವರು ಈ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಅಪ್ಪನ ಪಾತ್ರದಲ್ಲಿ ಖ್ಯಾತ ನಟ ಪ್ರಕಾಶ್ ರೈ ಹಾಗೂ ಮಗನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ. ಎರಡು ಹಾಡುಗಳ ಚಿತ್ರೀಕರಣ ಮುಗಿದರೆ, ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗುತ್ತದೆ. ಕನ್ನಡ ಚಿತ್ರ ವಿಶ್ವಮಟ್ಟದಲ್ಲಿ ವಿಜೃಂಭಿಸಬೇಕು‌ ಎಂಬ ಆಸೆ ಇರುವವನು ನಾನು. ಹಾಗಾಗಿ ನಾನು ಆರ್ ಸಿ ಸ್ಟುಡಿಯೋಸ್ ಆರಂಭಿಸಿರುವುದು. ನಮ್ಮ ಸಂಸ್ಥೆಯ ಜೊತೆಗೆ ಬೇರೆಬೇರೆ ಭಾಷೆಗಳ ಹೆಸರಾಂತ ಸಂಸ್ಥೆಗಳ ಸಹಯೋಗವಿದೆ. ಎಲ್ಲಾ ಭಾಷೆಗೂ ಸಲ್ಲುವ ಕಥಾಹಂದರ ಹೊಂದಿರುವ “ಫಾದರ್” ಚಿತ್ರ ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾಗಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು‌.

‘ಡಾರ್ಲಿಂಗ್’ ಕೃಷ್ಣ ಮಾತನಾಡಿ, ‘ಈ ಕಥೆ ಕೇಳಿದಾಗ ನನಗಿಂತ ಮೊದಲು ಇಷ್ಟವಾಗಿದ್ದು ಮಿಲನಾ ಅವರಿಗೆ. ಈ ಚಿತ್ರವನ್ನು ನೀವು ಮಾಡಲೇಬೇಕೆಂದು ಅವರು ಹುರಿದುಂಬಿಸಿದರು. ಪ್ರಕಾಶ್ ರೈ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. ‘ಫಾದರ್’ ತುಂಬಾ ದಿನಗಳವರೆಗೆ ಜನರ ಮನಸಿನಲ್ಲಿ ಉಳಿಯುವಂತ ಚಿತ್ರವಾಗುತ್ತದೆ’. ಸುದೀಪ್ ಅವರು ಬಂದು ಹಾರೈಸಿರುವ ನನ್ನ ಎಲ್ಲಾ ಸಿನಿಮಾಗಳು ಗೆದ್ದಿದೆ. ಈ ಚಿತ್ರ ಕೂಡ ಗೆಲ್ಲುತ್ತದೆ ಎಂಬ ನಂಬಿಕೆಯಿದೆ‌. ಸುದೀಪ್ ಅವರಿಗೆ ಧನ್ಯವಾದ ಎಂದರು.

ಅಪ್ಪ – ಮಗನ ಬಾಂಧವ್ಯದ ಚಿತ್ರಗಳು ಸಾಕಷ್ಟು ಬಂದಿದೆಯಾದರೂ, ಇದು ವಿಭಿನ್ನ. ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕನಿಗೆ ನಿರಾಸೆ ಮಾಡದ ಚಿತ್ರವಿದು ಎಂದು ನಿರ್ದೇಶಕ ರಾಜ್ ಮೋಹನ್ ತಿಳಿಸಿದರು.

“ಫಾದರ್” ಚಿತ್ರದಲ್ಲಿ ನನ್ನದು ಒಂದೊಳ್ಳೆಯ ಪಾತ್ರ. ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಹೇಳಿದರು ನಾಯಕಿ ಅಮೃತ ಅಯ್ಯಂಗಾರ್.

ಆರ್ ಚಂದ್ರು ಅವರು ಸಿ‌ನಿಮಾವನ್ನು ಪ್ರೀತಿಸುವ ರೀತಿ ನನಗೆ ಇಷ್ಟ. ಈ ಚಿತ್ರದಲ್ಲಿ ನನ್ನ ಪಾತ್ರವೂ ಚೆನ್ನಾಗಿದೆ ಎಂದರು ನಟ ನಾಗಭೂಷಣ್.

ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯ, ಛಾಯಾಗ್ರಾಹಕ ಸುಜ್ಞಾನ್, ಸಾಹಿತಿ ಮಂಜುನಾಥ್ ಮಾಗೋದಿ ಮುಂತಾದವರು “ಫಾದರ್” ಚಿತ್ರದ ಕುರಿತು ಮಾತನಾಡಿದರು. ಪ್ರೊಡಕ್ಷನ್ ಹೆಡ್ ಯಮುನಾ ಚಂದ್ರಶೇಖರ್, ಕಾರ್ಯಕಾರಿ ನಿರ್ಮಾಪಕ ಮೌರ್ಯ ಮಂಜು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor