NANDINI PRODUCT BRAND AMBASSADOR SHIVARAJKUMAR ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ನಂದಿನಿ ಹಾಲಿನ ಉತ್ಪನ್ನಗಳಿಗೆ ಬ್ರಾಂಡ್ ಅಂಬಾಸಿಡರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರ ಜಾಹೀರಾತನ್ನು ಬಿಡುಗಡೆ ಮಾಡಿದರು.

ಹಾಗೂ ಶಿವರಾಜ್ ಕುಮಾರ್ ಅವರನ್ನು ಸನ್ಮಾನಿಸಿದರು. ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಭಾಗವಹಿಸಿದ್ದರು.
