Mandya Hida Release on 16th. February. ಮಂಡ್ಯ ಹೈದ ಚಿತ್ರ ಈ ವಾರ ತೆರೆಯ ಮೇಲೆ ರಾರಾಜಿಸಲಿದೆ.
ಮಂಡ್ಯಹೈದ ಈ ವಾರ ತೆರೆಗೆ
ಮಂಡ್ಯಹೈದ ಸದ್ಯ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಚಿತ್ರ. ಅಭಯ್ ಚಂದ್ರಶೇಖರ್ ನಾಯಕನಾಗಿ ನಟಿಸಿರುವ ಮಂಡ್ಯ ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥಾಹಂದರ ಇರುವ ಈ ಚಿತ್ರವು ದಿ.ಲಲಳ೧೬ರ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.
ತನ್ನ ಪ್ರೀತಿ ಉಳಿಸಿಕೊಳ್ಳಲು ಮಂಡ್ಯದ ಯುವಕನೊಬ್ಬ ಹೇಗೆ ಹೋರಾಡುತ್ತಾನೆ, ಏನೇನೆಲ್ಲ ಸಾಹಸ ಮಾಡುತ್ತಾನೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ.


ಈ ಹಿಂದೆ ಮನಸಾಗಿದೆ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟಿದ್ದ, ಅಭಯ್ ಚಂದ್ರಶೇಖರ್ ತಮ್ಮ ಎರಡನೇ ಚಿತ್ರದಲ್ಲಿ ಪಕ್ಕಾ ಮಂಡ್ಯ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಭೂಮಿಕಾ ಭೂಮೇಶ್‌ಗೌಡ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ವಿ.ಶ್ರೀಕಾಂತ್ ಆಕ್ಷನ್ ಕಟ್ ಹೇಳಿದ್ದಾರೆ.
ನಾಯಕ ಅಭಯ್, ಶಿವ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ನೇಹ, ಸ್ನೇಹಿತರಿಗೆ ಹೆಚ್ಚು ಬೆಲೆಕೊಡುವವನು. ಅಂಥ ಸ್ನೇಹಿತರ ನಡುವೆ ಮಿಸ್ ಅಂಡರ್ ಸ್ಟ್ಯಾಂಡಿಂಗ್ ಬಂದಾಗ ಏನಾಗುತ್ತೆ ಅನ್ನೋದೇ ಮಂಡ್ಯ ಹೈದ ಚಿತ್ರದ ಕಥೆ.

ತೇಜಸ್ ಕ್ರಿಯೇಶನ್ಸ್ ಮೂಲಕ ಚಂದ್ರಶೇಖರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಸುರೇಂದ್ರನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ಮನುಗೌಡ ಕೆಲಸ ಮಾಡಿದ್ದಾರೆ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಚಿತ್ರದ. ಮೂರು ಭರ್ಜರಿ ಆಕ್ಷನ್ ಕಂಪೋಜ್ ಮಾಡಿದ್ದಾರೆ. ವೆಂಕಟ್ ಅವರು ಈ ಚಿತ್ರವನ್ನು ರಿಲೀಸ್ ಮಾಡುತ್ತಿದ್ದಾರೆ. ಬಲ ರಾಜವಾಡಿ, ಖಳನಟ ವಿಷ್ಣು ಅಲ್ಲದೆ ನಿರ್ಮಾಪಕ ಚಂದ್ರಶೇಖರ್ ಅವರೂ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.