“ರಾಜಕುಮಾರ್ ವಾರ್ಡ್ ನಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ”
ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ॥ ರಾಜಕುಮಾರ್ ವಾರ್ಡ್ ನ ಡಾ॥ ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂ ನಲ್ಲಿ ವಾಯು ವಿಹಾರಿಗಳು, ಕ್ರೀಡಾಪಟುಗಳ ಅನುಕೂಲಕ್ಕಾಗಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕರಾದ ಶ್ರೀ ಪ್ರಿಯಕೃಷ್ಣ ರವರು ಉದ್ಘಾಟಿಸಿದರು, ಮಾಜಿ ಪ್ರಧಾನ ಮಂತ್ರಿಗಳಾದ ದಿ॥ ಶ್ರೀ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ದಿ॥ ಶ್ರೀ ದೇವರಾಜ ಅರಸ್ ರವರುಗಳ ಹುಟ್ಟುಹಬ್ಬದ ಪ್ರಯುಕ್ತ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಹಾಜರಿದ್ದರು.