ಅಕ್ಷಿ ಚಿತ್ರತಂಡವನ್ನು ಸನ್ಮಾನಿಸಿದ ಹೆಚ್.ಡಿ.ಕೆ
ಇಂದು ಜೆ ಡಿ ಎಸ್ ನ ಕೇಂದ್ರ ಕಚೇರಿಯಲ್ಲಿ ಕನ್ನಡದ ಅತ್ಯುತ್ತಮ ಚಲನಚಿತ್ರವೆಂಬ ಗೌರವಕ್ಕೆ ಪಾತ್ರವಾಗಿ, ರಾಷ್ಟ್ರ ಪ್ರಶಸ್ತಿ ಪಡೆದ ‘ಅಕ್ಷಿ’ ಚಿತ್ರದ ನಿರ್ಮಾಪಕ, ಸಂಗೀತ ನಿರ್ದೇಶಕ, ನಟ ಕಾಲಾದೇಗುಲ ಶ್ರೀನಿವಾಸ್ ಮತ್ತು ನಿರ್ದೇಶಕ ಮನೋಜ್ ಕುಮಾರ್ ಅವರನ್ನು ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್. ಡಿ. ಕುಮಾರಸ್ವಾಮಿಯವರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿ ಗೌರವಿಸಿದರು.