Gost movie shooting visit “ಘೋಸ್ಟ್” ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ
*”ಘೋಸ್ಟ್” ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ* .
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್” ಚಿತ್ರದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ.
ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.