Wolf film teaser release ಬಿಡುಗಡೆಯಾಯಿತು ಬಹು ನಿರೀಕ್ಷಿತ “ವುಲ್ಫ್” ಚಿತ್ರದ ಟೀಸರ್ .

ಬಿಡುಗಡೆಯಾಯಿತು ಬಹು ನಿರೀಕ್ಷಿತ “ವುಲ್ಫ್” ಚಿತ್ರದ ಟೀಸರ್ .

ಸಂದೇಶ್ ಪ್ರೊಡಕ್ಷನ್ ನಿರ್ಮಾಣದ 30ನೇ ಚಿತ್ರವಾಗಿ ಬಹು ಭಾಷೆಗಳಲ್ಲಿ (ತಮಿಳು,ಕನ್ನಡ,ಹಿಂದಿ, ತೆಲುಗು) ಚಿತ್ರಿತವಾಗಿರುವ ಡಾನ್ಸಿಂಗ್ ಸ್ಟಾರ್ ಪ್ರಭುದೇವ, ಅನುಸೂಯ ಭಾರದ್ವಾಜ್,ಲಕ್ಷ್ಮಿ ರೈ,ವಸಿಷ್ಠ ಸಿಂಹ,ಅಂಜು ಕುರಿಯನ್,ಮುಂತಾದ ಖ್ಯಾತ ತಾರಾ ಬಳಗವನ್ನೆ ಹೊಂದಿರುವ ವುಲ್ಫ್ ಚಿತ್ರ ತಾಂತ್ರಿಕ ಕೆಲಸಗಳನ್ನು ಮುಗಿಸಿ ಇದೀಗ ಮೊದಲ ಹಂತವಾಗಿ ಆಗಸ್ಟ್ 3ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯವನ್ನು ಆರಂಭಿಸಿದೆ.

ದಕ್ಷಿಣ ಭಾರತೀಯ ಚಿತ್ರರಂಗದಲ್ಲೇ ವಿಭಿನ್ನವಾದ ಕಥಾ ಹಂದರವನ್ನು ಮೊದಲ ಬಾರಿಗೆ ಪ್ರೇಕ್ಷಕರ ಮುಂದೆ ಇಡಲು ಚಿತ್ರ ತಂಡ ಖಾತರವಾಗಿದೇ,ಇದೆ ತಿಂಗಳ 16 ರಂದು ನಿರ್ಮಾಪಕರಾದ ಸಂದೇಶ್ ನಾಗರಾಜ್ ಅವರ ಜನುಮದಿನ ಅಂದು ಅಭಿಜಾತ ಕಲಾವಿದ ವಿಜಯ ಸೇತುಪತಿ ಹಾಡಿರುವ ಚಿತ್ರದ ಮೊದಲ ಲಿರಿಕಲ್ ವೀಡಿಯೋ ಸಹ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ವಿನು ವೆಂಕಟೇಶ್ ನಿರ್ದೇಶನ ಮಾಡಿದ್ದು, ಖ್ಯಾತ ಛಾಯಾಗ್ರಾಹಕ ಅರುಳ್ ವಿನ್ಸೆಂಟ್ ಛಾಯಾಗ್ರಹಣ, ಖ್ಯಾತ ತಾರೆ ಜಯಸುಧಾ ಅವರ ಪುತ್ರ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅಮರೀಶ್ ಸಂಗೀತ ನಿರ್ದೇಶನ ಮಾಡಿರುವ, ಪ್ರೊಡಕ್ಷನ್ ಎಕ್ಸಿಕ್ಯೂಟಿವ್ ಆಗಿ ಪ್ರಸಾದ್ ಬಿ ಏನ್ ಮತ್ತು ಕಾಮರಾಜು ಕಾರ್ಯ ನಿರ್ವಹಿಸಿರುವ ಈ ಚಿತ್ರವನ್ನು ಸಂದೇಶ ನಾಗರಾಜ್ ಅವರು ಸಂದೇಶ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಿಸಿದ್ದಾರೆ….

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor